ಸರಗೂರು: ‘ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಹೊಂದಿರುವ ಎಚ್.ಡಿ.ಕೋಟೆ ಕ್ಷೇತ್ರವು ಶಿಕ್ಷಣದಲ್ಲಿ ಪ್ರಗತಿ ಸಾಧಿಸಬೇಕು’ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.
ಪಟ್ಟಣದ ನಾಮಧಾರಿಗೌಡ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಎಚ್.ಡಿ.ಕೋಟೆ, ಸರಗೂರು ತಾಲ್ಲೂಕು ಘಟಕದಿಂದ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕರಿಗೆ ಅಭಿನಂದನೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯನ್ನು ಶಿಕ್ಷಣ ಕ್ಷೇತ್ರದಲ್ಲಿ ಮೊದಲ ಸ್ಥಾನಕ್ಕೆ ತರಲು ಪಣ ತೊಟ್ಟಿದ್ದಾರೆ. ಅದೇ ರೀತಿ ಎಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳನ್ನು ಜಿಲ್ಲೆಯಲ್ಲಿಯೇ ಮೊದಲ ಸ್ಥಾನಕ್ಕೆ ತರಬೇಕು. ಶಿಕ್ಷಕರ ಭವನ ನಿರ್ಮಿಸಲು ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಕೆ.ಪಾಂಡು ಮಾತನಾಡಿ, ‘ನಲಿ-ಕಲಿ ಶಿಕ್ಷಣದಲ್ಲಿ ಎಚ್.ಡಿ.ಕೋಟೆ ರಾಷ್ಟ್ರ ಮಟ್ಟದಲ್ಲಿ ಪ್ರಗತಿ ಸಾಧಿಸಿದೆ. ಶಿಕ್ಷಕರು ಉತ್ತಮ ಸೇವೆ ಮಾಡುತ್ತಿದ್ದಾರೆ’ ಎಂದು ಶ್ಲಾಘಿಸಿದರು.
25 ಮಂದಿ ನಿವೃತ್ತ ಶಿಕ್ಷಕರನ್ನು ಅಭಿನಂದಿಸಲಾಯಿತು. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉತ್ತಮ ಶಾಲೆಗಳನ್ನು ಗುರುತಿಸಿ, ಪ್ರಶಸ್ತಿ ಪುರಸ್ಕಾರ ನೀಡಲಾಯಿತು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ಎಚ್.ಎಸ್.ಉಮೇಶ್ ಪ್ರಧಾನ ಭಾಷಣ ಮಾಡಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ವಿನಾಯಕ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾ ರಾಮಚಂದ್ರ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್, ಸದಸ್ಯ ಎಚ್.ಸಿ.ನರಸಿಂಹಮೂರ್ತಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್, ಚಲುವಕೃಷ್ಣ, ಸಣ್ಣತಾಯಮ್ಮ, ಹೇಮಾವತಿ, ನೂರಾಳಸ್ವಾಮಿ, ಶಿವಕುಮಾರ್, ನವೀನ್, ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಾರಯ್ಯ, ನಾಮಧಾರಿಗೌಡ ಸಮಾಜದ ಅಧ್ಯಕ್ಷ ಎಂ.ಎನ್. ಭೀಮರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸರಗೂರು ಅಧ್ಯಕ್ಷ ಬಿ.ಎನ್.ಸತೀಶ್, ಜಿ.ಎಸ್.ರಾಮೇಗೌಡ, ರಾಮಪ್ರಸಾದ್, ಚಂದ್ರಕುಮಾರ್, ಎಚ್.ಬಿ.ಜ್ಯೋತಿ, ವಸಂತ್‌ಕುಮಾರ್, ಸಿದ್ದರಾಜು, ಕೆಂಪೇರಾಮೇಗೌಡ, ಸುರೇಶ್‌ಕುಮಾರ್, ಯಶ್ವಂತ್‌ಕುಮಾರ್, ಎ.ಎಸ್.ಮಹದೇವು, ಗಿರೀಶ್‌ಮೂರ್ತಿ, ಸೋಮಸುಂದರ್, ಸುರೇಶ್, ಗುರುಸ್ವಾಮಿ, ರವಿ, ಮಹೇಂದ್ರ, ರವೀಂದ್ರಬಾಬು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.