ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೊಳಿಸಿ: ಕದಂಬ ಸೈನ್ಯ ಕನ್ನಡ ಸಂಘಟನೆ

Published : 31 ಆಗಸ್ಟ್ 2024, 14:27 IST
Last Updated : 31 ಆಗಸ್ಟ್ 2024, 14:27 IST
ಫಾಲೋ ಮಾಡಿ
Comments

ಮೈಸೂರು: ‘ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಯಾಗಲಿ’ ಎಂದು ಒತ್ತಾಯಿಸಿ ಕದಂಬ ಸೈನ್ಯ ಕನ್ನಡ ಸಂಘಟನೆ ಸದಸ್ಯರು ಶನಿವಾರ ಅರಮನೆ ಮುಂಭಾಗದ ರಾಜ್‌ಕುಮಾರ್ ಉದ್ಯಾನದ ಬಳಿ ಪ್ರತಿಭಟಿಸಿದರು.

‘ಹಿಂದಿ ಹೇರಿಕೆ, ಕಾವೇರಿ, ಮಹದಾಯಿ ಸಂಕಷ್ಟದ ಸಮಯದಲ್ಲಿ ಕನ್ನಡಿಗರು ಒಂದಾಗಿ ಹೋರಾಡುವ ಅಗತ್ಯವಿದೆ. ಸರೋಜಿನಿ ಮಹಿಷಿ ಪರಿಷ್ಕೃತ ವರದಿಯಲ್ಲಿರುವಂತೆ ಖಾಸಗಿ ವಲಯದ ಡಿ ಮತ್ತು ಸಿ ದರ್ಜೆ ಹುದ್ದೆಗಳಿಗೆ ಶೇ 100ರಷ್ಟು ಕನ್ನಡಿಗರ ನೇಮಕ ಮಾಡಬೇಕು. ಶೇ 80ರಷ್ಟು ಉನ್ನತ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದ ಎಲ್ಲ ಬ್ಯಾಂಕ್‌ಗಳ ಗುಮಾಸ್ತರ ಹುದ್ದೆ ಆಯ್ಕೆಯಾಗುವವರಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು. 10ನೇ ತರಗತಿಯಲ್ಲಿ ಕನ್ನಡ ಭಾಷೆ ವ್ಯಾಸಂಗ ಮಾಡದವರು ರಾಜ್ಯ ಭಾಷೆ ಪರೀಕ್ಷೆ ಕಡ್ಡಾಯವಾಗಿ ಪಾಸ್ ಮಾಡಬೇಕು. ಸ್ಥಳೀಯರೆಂದು ಪರಿಗಣಿಸಲು ರಾಜ್ಯದಲ್ಲಿ 15 ವರ್ಷ ವಾಸವಿರಬೇಕು. ಕನ್ನಡ ಭಾಷಾ ಜ್ಞಾನ ಇರಬೇಕು. ಅಲ್ಲದೆ ಎಸ್‌ಎಸ್‌ಎಲ್‌ಸಿ ಸರ್ಟಿಫಿಕೇಟ್, ಪಡಿತರ ಚೀಟಿ, ಜನ್ಮ ದಾಖಲೆ, ಆಧಾರ್ ಕಾರ್ಡ್ ದಾಖಲೆ ಹೊಂದಿರಬೇಕೆಂಬ ಕಾನೂನು ಜಾರಿಯಾಗಬೇಕು’ ಎಂದರು.

ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ, ರಾಜ್ಯ ಸಹಕಾರ್ಯದರ್ಶಿ ಬಿ.ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ನಾ.ಮಹದೇವಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT