ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

7ನೇ ವೇತನ ಆಯೋಗದ ವರದಿ ಅನುಷ್ಠಾನವಾಗಲಿ: ಸಿ.ಎಸ್.ಷಡಕ್ಷರಿ

Published 22 ಜೂನ್ 2024, 13:40 IST
Last Updated 22 ಜೂನ್ 2024, 13:40 IST
ಅಕ್ಷರ ಗಾತ್ರ

ಬಾಗಲಕೋಟೆ: ‘7ನೇ ವೇತನ ಆಯೋಗದ ವರದಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರ ಕೂಡಲೇ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು. ಜುಲೈ 15ರೊಳಗೆ ವರದಿ ಜಾರಿಗೊಳಿಸಿ ನೌಕರರ ಬೇಡಿಕೆ ಈಡೇರಿಸಬೇಕು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಒತ್ತಾಯಿಸಿದರು.

ನಗರದ ಕಲಾಭವನದಲ್ಲಿ ಶನಿವಾರ ನಡೆದ ಸಂಘದ ಜಿಲ್ಲಾ ಘಟಕದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು ನೂತನವಾಗಿ ನಿರ್ಮಿಸಲಾದ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು. 

‘ಚುನಾವಣೆ ಮುಗಿದ ನಂತರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಸಚಿವ ಸಂಪುಟದ ಸಭೆಯಲ್ಲೂ ವಿಷಯ ಚರ್ಚೆಯಾಗಿದ್ದು, ಕಡತ ಆರ್ಥಿಕ ಇಲಾಖೆಗೆ ಹೋಗಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿ ಜುಲೈ 15 ರೊಳಗೆ ವರದಿ ಅನುಷ್ಠಾನಗೊಳಿಸುವ ವಿಶ್ವಾಸವಿದೆ. ಸರ್ಕಾರ ಸ್ಪಂದಿಸದಿದ್ದಲ್ಲಿ ಹೋರಾಟದ ಹೆಜ್ಜೆ ಇಡಬೇಕಾಗುತ್ತದೆ. ಹಳೆಯ ಪಿಂಚಣಿ ಯೋಜನೆ ಜಾರಿ ಮತ್ತು ಎಲ್ಲ ನೌಕರರಿಗೂ ಆರೋಗ್ಯ ಯೋಜನೆ ಜಾರಿ ವಿಷಯದಲ್ಲೂ ಸರ್ಕಾರಕ್ಕೆ ಒತ್ತಡ ಹೇರಲಾಗಿದೆ’ ಎಂದು ಹೇಳಿದರು.

‘ಗ್ಯಾರಂಟಿ ಯೋಜನೆಗಳಿಂದಾಗಿ 7ನೇ ವೇತನ ಆಯೋಗದ ವರದಿ ಜಾರಿ ವಿಳಂಬವಾಗುತ್ತಿದೆ ಎನ್ನಲಾಗಿದ್ದು, ಸರ್ಕಾರಿ ನೌಕರರು ಸಹ ಆಡಳಿತದ ಒಂದು ಭಾಗ ಎಂಬುದನ್ನು ಪರಿಗಣನೆಗೆ ತೆಗೆದುಕೊಂಡು ಶೀಘ್ರ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT