ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಸಂಸದ ಯದುವೀರ್

Published : 12 ಸೆಪ್ಟೆಂಬರ್ 2024, 16:07 IST
Last Updated : 12 ಸೆಪ್ಟೆಂಬರ್ 2024, 16:07 IST
ಫಾಲೋ ಮಾಡಿ
Comments

ಕೆ.ಆರ್.ನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿಬಿಐ ತನಿಖೆ ಎದುರಿಸಲು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಇಲ್ಲಿನ ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಪ್ರಧಾನ ಕಚೇರಿಗೆ ಗುರುವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಾಡಳಿತದಿಂದ ಮುಡಾ ಸೇರಿದಂತೆ ಸಾಕಷ್ಟು ಹಗರಣಗಳು ಬೆಳಕಿಗೆ ಬಂದಿವೆ. ಅವರ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮುಖಂಡರ ನೇತೃತ್ವದಲ್ಲಿ ದೊಡ್ಡ ಹೋರಾಟ, ಪಾದಯಾತ್ರೆ ಮಾಡಿದ್ದೇವೆ. ನಮ್ಮ ನಿಲುವು ಬಹಳ ಸ್ಪಷ್ಟವಾಗಿದೆ, ಅವರು ರಾಜೀನಾಮೆ ನೀಡಿ ಸಿಬಿಐ ತನಿಖೆಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.

ಚಾಮುಂಡಿ ಬೆಟ್ಟದ ಪ್ರಾಧಿಕಾರದ ವಿಷಯದಲ್ಲೂ ನಮ್ಮ ನಿಲುವ ಸ್ಪಷ್ಟವಾಗಿದೆ. ಸರ್ಕಾರ ನಮ್ಮ ದೇವಾಲಯಗಳನ್ನು ನಿಯಂತ್ರಿಸುವ ಅಗತ್ಯವಿಲ್ಲ. ಪ್ರಾಚೀನ ಕಾಲದಿಂದ ಬಂದ ಧಾರ್ಮಿಕ ವಿಧಿ ವಿಧಾನಗಳು ಇವತ್ತಿನವರೆಗೂ ಹೇಗೆ ಬಂದಿದೆಯೋ ಹಾಗೇ ಮುಂದುವರಿಸಬೇಕು. ದೇವಾಲಯದ ಪೋಷಕರಾಗಿ ಕೆಲಸ ಮಾಡುತ್ತಾ ಬಂದಿದ್ದೇವೆ, ಅದರಂತೆ ಮುಂದುವರೆಯುತ್ತದೆ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚಿನ ವಿಷಯ ಹೇಳು ಸಾಧ್ಯವಿಲ್ಲ ಎಂದು ಹೇಳಿದರು.

ನಾಗಮಂಗಲದಲ್ಲಿ ನಡೆದ ಘಟನೆಯನ್ನು ಸರ್ಕಾರದ ಬಹಳ ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಮುಖಂಡ ಕೆ.ಎನ್.ದಿನೇಶ್ ಮತ್ತು ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರು ಸಂಸದರನ್ನು ಸನ್ಮಾನಿಸಿದರು.

ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಬ್ಯಾಂಕ್ ನಿರ್ದೇಶಕರಾದ ಮಧುವನಹಳ್ಳಿ ಕೇಶವ, ಚಂದ್ರಶೇಖರ್, ಚಂದ್ರು, ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಸಿ.ಸುರೇಶ್, ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ಪುರಸಭೆ ಸದಸ್ಯ ಕೆ.ಎಲ್.ಜಗದೀಶ್, ಮುಖಂಡರಾದ ಎಂ.ಕೆ.ಸುಜಯ್ ಕುಮಾರ್ ಗೌಡ, ಹೆಬ್ಬಾಳು ವೇಣು, ಮಾರ್ಕಂಡಯ್ಯ, ಕೃಷ್ಣಶೆಟ್ಟಿ, ಮಂಜು, ರಂಗನಾಥ್, ಧನಂಜಯ್, ರಾಧಾಕೃಷ್ಣ, ಮಹದೇವ್, ಸುಬ್ರಹ್ಮಣ್ಯ, ಸಿ.ಡಿ.ಮಹದೇವಪ್ಪ, ರಾಮರಾಜು, ರೆಡ್ಡಿ, ದಯಾಕರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT