ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು: ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Published 8 ಆಗಸ್ಟ್ 2024, 4:17 IST
Last Updated 8 ಆಗಸ್ಟ್ 2024, 4:17 IST
ಅಕ್ಷರ ಗಾತ್ರ

ಮೈಸೂರು: ಹೆಂಡತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕಾಗಿ, ಸರಗೂರು ತಾಲ್ಲೂಕಿನ ಅಂತರಸಂತೆ ಗ್ರಾಮದ ನಿವಾಸಿ ಸುನೀಲ್‌ ಎಂಬುವರನ್ನು ಕೊಲೆ ಮಾಡಿದ್ದ ರವಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮೃತನ ತಾಯಿಗೆ ₹3 ಲಕ್ಷ ಪರಿಹಾರ ನೀಡುವಂತೆ 8ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

2020ರ ಫೆ.8ರಂದು ಸುನೀಲ್‌ ಗ್ರಾಮದ ವೆಂಕಟೇಶ್ವರ ಬೇಕರಿ ಸಮೀಪ ನಿಂತಿದ್ದಾಗ ರವಿ ಏಕಾಏಕಿ ದಾಳಿ ಮಾಡಿ ಮಚ್ಚಿನಿಂದ ತಲೆ, ಕೈ, ತೊಡೆಗೆ ಮಾರಣಾಂತಿಕ ಹಲ್ಲೆ ನಡೆಸಿದ್ದರಿಂದ ಮೃತಪಟ್ಟಿದ್ದರು. ಎಚ್‌.ಡಿ.ಕೋಟೆ ಠಾಣೆಯ ಆಗಿನ ಇನ್‌ಸ್ಪೆಕ್ಟರ್‌ ಪುಟ್ಟಸ್ವಾಮಿ ವಿಚಾರಣೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 

ವಿಚಾರಣೆ ನಡೆಸಿದ ಟಿ.ಗೋವಿಂದಯ್ಯ ಅವರು ರವಿ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ ಹಾಗೂ ಮೃತನ ತಾಯಿಗೆ ಪರಿಹಾರವಾಗಿ ₹3 ಲಕ್ಷ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಕೆ.ಎಂ.ಸಿ.ಶಿವಶಂಕರಮೂರ್ತಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT