ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿರಾಗೆ ಜೀವಮಾನ ಸಾಧನೆ ಪ್ರಶಸ್ತಿ

Last Updated 23 ನವೆಂಬರ್ 2022, 13:49 IST
ಅಕ್ಷರ ಗಾತ್ರ

ಮೈಸೂರು: ಭಾರತೀಯ ಸಮಾಜವಿಜ್ಞಾನ ಸಂಘದಿಂದ ಕೊಡ ಮಾಡುವ ‘ಜೀವಮಾನ ಸಾಧನೆ’ ಪ್ರಶಸ್ತಿಗೆ ಮೈಸೂರು ವಿಶ್ವವಿದ್ಯಾಲಯ ಮಾನಸ ಗಂಗೋತ್ರಿಯ ಡಾ.ಬಿ.ಆರ್.ಅಂಬೇಡ್ಕರ್‌ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕಿ ಪ್ರೊ.ಆರ್.ಇಂದಿರಾ ಆಯ್ಕೆಯಾಗಿದ್ದಾರೆ.

ಸಮಾಜವಿಜ್ಞಾನದ ಅಭಿವೃದ್ಧಿಗೆ ನೀಡಿದ ಅಸಾಧಾರಣ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಸಂಘದಿಂದ ಕೊಡುವ ಅತ್ಯುನ್ನತ ಪ್ರಶಸ್ತಿ ಇದಾಗಿದೆ. ಮೇಘಾಲಯದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ 47ನೇ ಭಾರತೀಯ ಸಮಾಜವಿಜ್ಞಾನ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು. ತಮ್ಮ 50 ವರ್ಷಗಳ ವೃತ್ತಿ ಜೀವನದಲ್ಲಿ ಮೈಸೂರು ವಿ.ವಿ ಸಮಾಜವಿಜ್ಞಾನ ವಿಭಾಗದಲ್ಲಿ 42 ವರ್ಷಗಳವರೆಗೆ ಅಧ್ಯಾಪಕಿಯಾಗಿ, ಮುಖ್ಯಸ್ಥರಾಗಿ, ಅಂತರರಾಷ್ಟ್ರೀಯ ಕೇಂದ್ರ ಮತ್ತು ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ಎರಡು ಬಾರಿ ಫುಲ್‌ಬ್ರೈಟ್, 4 ಬಾರಿ ಶಾಸ್ತ್ರಿ ಇಂಡೋ ಕೆನಡಿಯನ್ ಪುರಸ್ಕಾರಗಳಿಗೆ ಭಾಜನವಾಗಿದ್ದಾರೆ. ಭಾರತೀಯ ಸಮಾಜವಿಜ್ಞಾನ ಸಂಘದ ಅಧ್ಯಕ್ಷೆ, ಕಾರ್ಯದರ್ಶಿ ಹಾಗೂ ಕರ್ನಾಟಕ ಸಮಾಜಶವಿಜ್ಞಾನ ಸಂಘದ ಅಧ್ಯಕ್ಷೆಯಾಗಿಯೂ ಕೆಲಸ ಮಾಡಿದ್ದಾರೆ. ಇದೆಲ್ಲವನ್ನೂ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT