ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು– ಕೊಡಗು ಲೋಕಸಭಾ ಕ್ಷೇತ್ರ: ಮೊದಲ ದಿನ ಇಬ್ಬರಿಂದ ನಾಮಪತ್ರ

ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಅಧಿಸೂಚನೆ ಪ್ರಕಟ
Published 28 ಮಾರ್ಚ್ 2024, 15:49 IST
Last Updated 28 ಮಾರ್ಚ್ 2024, 15:49 IST
ಅಕ್ಷರ ಗಾತ್ರ

ಮೈಸೂರು: ಲೋಕಸಭೆ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಡಿಸಲಾಗಿದ್ದು, ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿ ಮೊದಲ ದಿನ ಇಬ್ಬರು ನಾಮಪತ್ರ ಸಲ್ಲಿಸಿದರು.

ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) (ಎಸ್‌ಯುಸಿಐಸಿ) ಪಕ್ಷದ ಸುನೀಲ್ ಟಿ.ಆರ್. ಮತ್ತು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಎಂ.ಎಸ್. ಪ್ರವೀಣ್ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಏ.26ರಂದು ಮತದಾನ ನಡೆಯಲಿದೆ. 

ಮೆರವಣಿಗೆ: ಸುನೀಲ್‌ ಅವರು ರಾಮಸ್ವಾಮಿ ವೃತ್ತದಲ್ಲಿ ಹುತಾತ್ಮ ರಾಮಸ್ವಾಮಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗನ್‌ಹೌಸ್‌ವರೆಗೆ ಮೆರವಣಿಗೆ ನಡೆಸಿ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಪಕ್ಷದ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಬಿ.ರವಿ‌ ಮಾತನಾಡಿ, ‘ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಬೆಲೆ ಏರಿಕೆ, ನಿರುದ್ಯೋಗ, ಬಡತನ ಹೆಚ್ಚಾಗುತ್ತಲೇ ಇದೆ. ದುಡಿಯುವ ಜನ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ, ದುಡಿಯುವ ಜನರ ರಾಜಕೀಯವನ್ನು ಬಲಪಡಿಸಲು ಸ್ಪರ್ಧಿಸುತ್ತಿದ್ದೇವೆ. ಭಾರತವು ಪ್ರಜಾಪ್ರಭುತ್ವದ ತಾಯಿ ಎಂದು ಬೀಗುವ ಬಿಜೆಪಿ ಇಂದು ಈ ದೇಶದ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ. ಇದರ ವಿರುದ್ಧ ಹೋರಾಟಗಳನ್ನು ಬೆಳೆಸಲು ನಮ್ಮ ಪಕ್ಷವನ್ನು ಬೆಂಬಲಿಸಬೇಕು’ ಎಂದು ಕೋರಿದರು.

ಎಸ್‌ಯುಸಿಐ‌ಸಿ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಚಂದ್ರಶೇಖರ್ ಮೇಟಿ ಮಾತನಾಡಿ, ‘ಇಂದಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾತಿ ಧರ್ಮದ ಹೆಸರಿನಲ್ಲಿ ಜನರ ಒಗ್ಗಟ್ಟನ್ನು ಮುರಿಯುತ್ತಿದೆ. ದಿನೇ ದಿನೇ ಆರೋಗ್ಯ ಖಾಸಗೀಕರಣ, ಶಿಕ್ಷಣದ ವ್ಯಾಪಾರೀಕರಣ ಮತ್ತು ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಲೇ ಇದೆ’ ಎಂದು ದೂರಿದರು.

‘ಬಿಜೆಪಿ ಅಥವಾ ಕಾಂಗ್ರೆಸ್... ಯಾವ ಪಕ್ಷವೂ ಜನಸಾಮಾನ್ಯರ ಪರವಾಗಿಲ್ಲ. ಇದಕ್ಕೆ ನೈಜ ಪರ್ಯಾಯ ಎಂದರೆ ಅದು ಎಸ್‌ಯುಸಿಐಸಿ. ನಮ್ಮ ಅಭ್ಯರ್ಥಿ ಸುನೀಲ್‌ ಕಾಲೇಜು ವಿದ್ಯಾರ್ಥಿ ಆಗಿದ್ದಾಗಿನಿಂದಲೂ ಯುವಜನರ ಹಾಗೂ ಜನಸಾಮಾನ್ಯರ ಪರವಾಗಿ ಹೋರಾಟಗಳನ್ನು ಕಟ್ಟಿ ಬೆಳೆಸಿದ್ದಾರೆ’ ಎಂದು ಹೇಳಿದರು.

ಪಕ್ಷದ ಜಿಲ್ಲಾ ಸೆಕ್ರಟೇರಿಯೇಟ್ ಸದಸ್ಯೆ ಎಂ.ಉಮಾದೇವಿ, ಜಿಲ್ಲಾ ಸಮಿತಿ ಸದಸ್ಯರಾದ ಸಂಧ್ಯಾ ಪಿ.ಎಸ್, ಸೀಮಾ ಜಿ.ಎಸ್., ವಿ. ಯಶೋಧರ್, ಹರೀಶ್, ಸದಸ್ಯರಾದ ಸುಭಾಷ್, ಚಂದ್ರಕಲಾ, ನೀತುಶ್ರೀ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗವಹಿಸಿದ್ದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಎಂ.ಎಸ್. ಪ್ರವೀಣ್ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು –ಪ್ರಜಾವಾಣಿ ಚಿತ್ರ
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಎಂ.ಎಸ್. ಪ್ರವೀಣ್ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು –ಪ್ರಜಾವಾಣಿ ಚಿತ್ರ
ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸುವ ಅಫಿಡವಿಡ್‌ಗಳನ್ನು ಚುನಾವಣಾಧಿಕಾರಿ ಕಚೇರಿ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ
ಡಾ.ಕೆ.ವಿ. ರಾಜೇಂದ್ರ ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT