ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲೂ ನಮ್ಮ ‘ಗ್ಯಾರಂಟಿ’ಗೆ ಮತ ನೀಡಿ: ಎಂ. ಲಕ್ಷ್ಮಣ ಮನವಿ

Published 6 ಏಪ್ರಿಲ್ 2024, 15:29 IST
Last Updated 6 ಏಪ್ರಿಲ್ 2024, 15:29 IST
ಅಕ್ಷರ ಗಾತ್ರ

ಮೈಸೂರು: ‘ದೇಶದಲ್ಲೂ ಕಾಂಗ್ರೆಸ್‌ನಿಂದ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಘೋಷಿಸಲಾಗಿದ್ದು, ಅದಕ್ಕಾಗಿ ನನಗೊಂದು ಮತ ಕೊಡಿ’ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಕೋರಿದರು.

ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿ, ಸಿದ್ದಲಿಂಗಪುರ, ಕೆ.ಆರ್.ಮಿಲ್ ಕಾಲೊನಿ, ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯಾ, ಆಲನಹಳ್ಳಿ ಹಾಗೂ ಹೊಸುಂಡಿ ಗ್ರಾಮಗಳಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ಶನಿವಾರ ಮತ ಯಾಚಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಬರಗಾಲವಿದ್ದರೂ ಕೇಂದ್ರ ಸರ್ಕಾರ ಪರಿಹಾರವಾಗಿ ನಯಾಪೈಸೆಯನ್ನೂ ಕೊಟ್ಟಿಲ್ಲ. ರಾಜ್ಯ ಸರ್ಕಾರದಿಂದ ಸೆಪ್ಟೆಂಬರ್‌ನಲ್ಲೇ ಮನವಿ ಸಲ್ಲಿಸಿದ್ದರೂ ಸ್ಪಂದಿಸಿಲ್ಲ. ನಮ್ಮ ರಾಜ್ಯದ ತೆರಿಗೆ ಹಣದಲ್ಲಿ ನ್ಯಾಯಯುತವಾಗಿ ಸಲ್ಲಬೇಕಾದ ಅನುದಾನವನ್ನೂ ನೀಡಿಲ್ಲ. ಸುಳ್ಳು ಹೇಳುವ ಕೆಲಸವನ್ನಷ್ಟೆ ಕೇಂದ್ರ ಸರ್ಕಾರ ಮಾಡುತ್ತಿದೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಮುಖಂಡರಾದ ಬೀರಿಹುಂಡಿ ಬಸವಣ್ಣ, ರಾಕೇಶ್ ಪಾಪಣ್ಣ, ರೇಖಾ ವೆಂಕಟೇಶ್, ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಅರುಣ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಉಮಾಶಂಕರ್, ಕೃಷ್ಣಕುಮಾರ್‌ಸಾಗರ್, ಕೆಂಪನಾಯಕ, ಇಲವಾಲ ಹಾಗೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಸತೀಶ್, ಗುರುಸ್ವಾಮಿ, ಮಲ್ಲೇಶ್, ರಾಮೇಗೌಡ, ಮುತ್ತುರಾಜ್, ಕೆ.ಎಸ್.ಸಣ್ಣಸ್ವಾಮಿ, ಗ್ರಾ.ಪಂ. ಮಾಜಿ ಸದಸ್ಯ ಚೆನ್ನಯ್ಯ, ಹಂಚ್ಯಾ ಶ್ರೀನಿವಾಸ್‌ಗೌಡ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT