ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಟಿಕೆಟ್‌ ನನಗೇ ಸಿಗಲಿದೆ: ‍ಪ್ರತಾಪಸಿಂಹ

Published 27 ಫೆಬ್ರುವರಿ 2024, 12:56 IST
Last Updated 27 ಫೆಬ್ರುವರಿ 2024, 12:56 IST
ಅಕ್ಷರ ಗಾತ್ರ

ಮೈಸೂರು: ‘ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆ ಬಗ್ಗೆ ಊಹಾಪೋಹ ಹರಡಲಾಗುತ್ತಿದೆ. ಈ ಬಾರಿಯೂ ನನಗೇ ಟಿಕೆಟ್‌ ಸಿಗಲಿದ್ದು, ಮೂರನೆಯ ಬಾರಿಯೂ ಗೆಲುವು ಸಾಧಿಸುವೆ’ ಎಂದು ಸಂಸದ ಪ್ರತಾಪ ಸಿಂಹ ಪ್ರತಿಪಾದಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ನನ್ನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ್ದಾರೆ. ವರಿಷ್ಠರ ಆಶೀರ್ವಾದ ನನ್ನ ಮೇಲಿದೆ. 10 ವರ್ಷದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೈಹಿಡಿಯಲಿವೆ’ ಎಂದರು. 

‘ಮೊದಲ ಬಾರಿಗೆ ಬಂದಾಗ ನನ್ನ ಜೊತೆ ಯಾರೂ ಇರಲಿಲ್ಲ. ಪತ್ರಕರ್ತನಾಗಿದ್ದ ನನ್ನನ್ನು ಮೈಸೂರು– ಕೊಡಗಿನ ಜನ ಎರಡು ಬಾರಿ ಗೆಲ್ಲಿಸಿದರು. ಈಗ ಅಪಾರ ಸಂಖ್ಯೆಯ ನಾಯಕರು ಹಾಗೂ ಕಾರ್ಯಕರ್ತರು ನನ್ನ ಜೊತೆಗಿದ್ದಾರೆ. ಬಿಜೆಪಿ– ಜೆಡಿಎಸ್‌ ನಡುವೆ ಟಿಕೆಟ್‌ ಹಂಚಿಕೆ ಮಾತಕತೆ ಯಾವಾಗ ಮುಗಿಯುತ್ತದೆ ಎಂಬುದು ಗೊತ್ತಿಲ್ಲ. ಹಂಚಿಕೆ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT