ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿಂದ ಬಿಜೆಪಿ ಟಿಕೆಟ್ ಘೋಷಣೆ: ಯದುವೀರ್ ಮೊದಲ ಪ್ರತಿಕ್ರಿಯೆ

Published 13 ಮಾರ್ಚ್ 2024, 18:11 IST
Last Updated 13 ಮಾರ್ಚ್ 2024, 18:11 IST
ಅಕ್ಷರ ಗಾತ್ರ

ಮೈಸೂರು: ‘ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ’ ಎಂದು ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಿಕೆಟ್‌ ಘೋಷಣೆ ಬಳಿಕ ಫೇಸ್‌ಬುಕ್‌ನ ತಮ್ಮ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ‘ಒಂಬತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗೂ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದೇನೆ. ಅನೇಕ ಪ್ರಜಾಬಾಂಧವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ನನ್ನನ್ನು ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ. ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ’ ಎಂದು ಕೋರಿದ್ದಾರೆ.

‘ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ. ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ತಮ್ಮ ಮೇಲೆ ನಂಬಿಕೆ ಇಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ‍ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೆಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

‘ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ಪ್ರತಾಪ ಸಿಂಹ ಅವರನ್ನು ಅಭಿನಂದಿಸುತ್ತೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ಅವರ ಬದ್ಧತೆ ನಮ್ಮೆಲ್ಲರ ಭವಿಷ್ಯದ ಆಕಾಂಕ್ಷೆಗಳಿಗೆ ಭದ್ರ ಅಡಿಪಾಯ ಹಾಕಿಕೊಟ್ಟಿದೆ’ ಎಂದು ಶ್ಲಾಘಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT