ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ಗೆ ಉತ್ತಮ ವಾತಾವರಣ: ಸಿದ್ದರಾಮಯ್ಯ

Published 26 ಏಪ್ರಿಲ್ 2024, 7:15 IST
Last Updated 26 ಏಪ್ರಿಲ್ 2024, 7:15 IST
ಅಕ್ಷರ ಗಾತ್ರ

ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದ್ದು, 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಸ್ವಗ್ರಾಮವಾದ ಸಿದ್ದರಾಮನಹುಂಡಿಯಲ್ಲಿ ಶುಕ್ರವಾರ ಮತ ಚಲಾಯಿಸಿದ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದರು.

ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರಿದಂತೆ ಮೊದಲ ಹಂತದಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಜನರು ಗ್ಯಾರಂಟಿ ಯೋಜನೆಗಳ ಕೈ ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಮೂರು ದಿನಗಳ ಮೋದಿ ಭಾಷಣ ಹತಾಶೆ ಹಾಗೂ ಪ್ರಚೋದನಾಕಾರಿ ಆಗಿದೆ ಹೊರತು ಪರಿಣಾಮಕಾರಿ ಆಗಿಲ್ಲ ಎಂದರು.

ದೇವೇಗೌಡರು ಹಾಗೂ ಅವರ ಕುಟುಂಬದವರ ಕಣ್ಣೀರು ಕೃತಕವಾದದ್ದು. ರಾಜಕಾರಣದ ವಿಚಾರದಲ್ಲಿ ಈ ರೀತಿ ಕಣ್ಣೀರು ಬರಬಾರದು ಎಂದರು.

ಎನ್ ಡಿಎ ಗೆಲ್ಲಲಿದೆ ಎಂದ ಸಿದ್ದರಾಮಯ್ಯ:

ಮೊದಲ ಹಂತದ 102 ಕ್ಷೇತ್ರಗಳ ಪೈಕಿ ಎನ್ ಡಿಎ ಮೈತ್ರಿಕೂಟ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಾಯಿ ತಪ್ಪಿ ಹೇಳುವ ಮೂಲಕ ಸಿದ್ದರಾಮಯ್ಯ ಗೊಂದಲ ಮೂಡಿಸಿದರು.

' ಮೋದಿ ಅವರಿಗೆ ತಾವು ಗೆಲ್ಲುವುದಿಲ್ಲ ಎಂದು ಗೊತ್ತಾಗಿದೆ. ಎನ್ ಡಿಎ ಮತ್ತು ಮೈತ್ರಿಕೂಟ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT