ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಹರು ಕಡ್ಡಾಯವಾಗಿ ಮತದಾನ ಮಾಡಿ: ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ

Published 20 ಏಪ್ರಿಲ್ 2024, 15:21 IST
Last Updated 20 ಏಪ್ರಿಲ್ 2024, 15:21 IST
ಅಕ್ಷರ ಗಾತ್ರ

ಮೈಸೂರು: ‘ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು’ ಎಂದು ಚುನಾವಣಾ ಆಯೋಗದ ರಾಜ್ಯ ಸ್ವೀಪ್ (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ತಿಳಿಸಿದರು.

ಇಲ್ಲಿನ ನ್ಯಾಯಾಲಯ ಸಮೀಪದ ಟೆನಿಸ್‌ ಕ್ಲಬ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆ ಏ.26ರಂದು ನಡೆಯಲಿದೆ. ಎಲ್ಲರೂ ಹಕ್ಕನ್ನು ಬಳಸಿಕೊಳ್ಳಬೇಕು. ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿ ಪಡೆದುಕೊಳ್ಳಲು, ಪ್ರತಿಕ್ರಿಯಿಸಲು, ಸಲಹೆ ನೀಡಲು ಹಾಗೂ ದೂರು ಸಲ್ಲಿಸಲು ಸಹಾಯವಾಣಿ 1950ಗೆ ಕರೆ ಮಾಡಬಹುದಾಗಿದೆ. ಎಲ್ಲರೂ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು’ ಎಂದರು.

ಮಹಾನಗರ ಪಾಲಿಕೆ ಆಯುಕ್ತೆ ಎನ್.ಎನ್. ಮಧು, ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಶಾಂತಾ, ಪಾಲಿಕೆಯ ಇಇ ನಾಗರಾಜ್, ವಲಯ ಆಯುಕ್ತೆ ರೇಖಾ ಶೆಟ್ಟಿ, ಪರಿಸರ ಎಂಜಿನಿಯರ್‌ ಮೈತ್ರಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT