ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ನಾಲ್ವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Published 31 ಮೇ 2023, 10:22 IST
Last Updated 31 ಮೇ 2023, 10:22 IST
ಅಕ್ಷರ ಗಾತ್ರ

ಮೈಸೂರು:ಇಲ್ಲಿನ ಮಹಾನಗರ ಪಾಲಿಕೆಯ ಅಭಿವೃದ್ಧಿ ವಿಭಾಗದ ಉಪ ಆಯುಕ್ತ ಮಹೇಶ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ನಾಗೇಶ್, ಮುಖ್ಯ ಲೆಕ್ಕಾಧಿಕಾರಿ ಮುತ್ತು ಹಾಗೂ ನಂಜನಗೂಡು ನಗರಾಭಿವೃದ್ಧಿ ಪ್ರಾಧಿಕಾರದ ಉಪ ನೋಂದಣಾಧಿಕಾರಿ ಶಿವಶಂಕರಮೂರ್ತಿಯವರ ಮೈಸೂರಿನ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಕಾರ್ಯಾಚರಣೆ ನಡೆಸಿ‌ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಲೋಕಾಯುಕ್ತ ಎಸ್.ಪಿ ಸುರೇಶ್ ಬಾಬು ನೇತೃತ್ವದ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಮನೆ ಜೊತೆಗೆ ಇತರೆ ಆಸ್ತಿ ದಾಖಲೆಗಳ ಪರಿಶೀಲನೆಯನ್ನೂ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT