ಮೈಸೂರು: ಮಾಜಿ ಸಚಿವ ಎಂ.ಶಿವಣ್ಣ ಬಿಜೆಪಿ ತೊರೆದು ಬುಧವಾರ ಕಾಂಗ್ರೆಸ್ ಸೇರ್ಪಡೆಯಾದರು.
ಇಲ್ಲಿನ ಕಾಂಗ್ರೆಸ್ ಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.
ಇದೇ ವೇಳೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಶಾಸಕ ತನ್ವೀರ್ ಸೇಠ್ ಅಧಿಕಾರ ಸ್ವೀಕರಿಸಿದರು.
ಸಚಿವ ಕೆ. ವೆಂಕಟೇಶ್, ಶಾಸಕರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.