ಹಂಪಾಪುರ: ಜೂನ್ 1 ರಂದು ಮಾದಾಪುರದ ಚಂದ್ರಮೌಳೇಶ್ವರ ಮಠದ ಶಾಲಾ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.

‘ಚಂದ್ರಮೌಳೇಶ್ವರ ಸ್ವಾಮೀಜಿ ಅವರ ಜಯಂತಿ ಪ್ರಯುಕ್ತ ಮೈಸೂರಿನ ಜೆಎಸ್ಎಸ್ ಆಯುರ್ವೇದ ಆಸ್ಪತ್ರೆಯ ಸಹಯೋಗದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಆಸ್ಪತ್ರೆಯ ತಜ್ಞ ವೈದ್ಯರು ನಡೆಸುವ ಈ ಶಿಬಿರದಲ್ಲಿ ಉಸಿರಾಟದ ಕಾಯಿಲೆಗಳು, ಹೆಣ್ಣುಮಕ್ಕಳ ಆರೋಗ್ಯ ಸಮಸ್ಯೆಗಳು, ಬೆನ್ನುನೋವು, ಮಂಡಿನೋವು, ಚರ್ಮ ರೋಗಗಳು, ಥೈರಾಯಿಡ್ ತೊಂದರೆಗಳು, ಗ್ಯಾಸ್ಟ್ರಿಕ್ಸಮಸ್ಯೆ ಸೇರಿದಂತೆ ಇನ್ನು ಮುಂತಾದ ಹಲವು ಸಮಸ್ಯೆಗಳಿಗೆ ಉಚಿತ ತಪಾಸಣೆ ಮತ್ತು ಸಲಹೆ ನೀಡಲಾಗುವುದು’ ಎಂದರು.

‘ಇದೇ ದಿನ ಚಂದ್ರಮೌಳೇಶ್ವರ ಸ್ವಾಮೀಜಿ ಜನ್ಮದಿನದ ನೆನಪಿಗಾಗಿ ಬೆಟ್ಟದ ಮೆಟ್ಟಿಲುಗಳ ಬದಿಗಳಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-38-2106788438

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.