ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ‘ಮಧ್ವ–ಪುರಂದರ ನಮನ’ಕ್ಕೆ ಚಾಲನೆ

Last Updated 3 ಫೆಬ್ರುವರಿ 2023, 14:45 IST
ಅಕ್ಷರ ಗಾತ್ರ

ಮೈಸೂರು: ಹರಿದಾಸ ಸಂಗೀತ ಸಾಹಿತ್ಯೋತ್ಸವ ಸಮಿತಿಯಿಂದ ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಮೂರು ದಿನಗಳವರೆಗೆ ಹಮ್ಮಿಕೊಂಡಿರುವ ‘ಮಧ್ವ–ಪುರಂದರ ನಮನ’ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನಂತಾಚಾರ್ಯ ಕಟಗೇರಿ ಅವರನ್ನು ಸನ್ಮಾನಿಸಲಾಯಿತು.

ಪಂಡಿತ್ ಮಧುಸೂದನ್ ಆಚಾರ್, ಪಂಡಿತ್ ಬಾದರಾಯನಾಚಾರ್, ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ, ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಾಸುದೇವ ಭಟ್, ಕಾಂಗ್ರೆಸ್ ಯುವ ಮುಖಂಡ ಎನ್.ಎಂ.ನವೀನ್ ಕುಮಾರ್, ಸಂಸ್ಥಾಪಕ ಕಾರ್ಯದರ್ಶಿ ಎಸ್.ರವಿಕುಮಾರ್, ಗುರು ರಾಘವೇಂದ್ರ ಸೇವಾ ಸಮಿತಿ ಅಧ್ಯಕ್ಷ ಎಸ್.ಬಿ.ವಾಸುದೇವಮೂರ್ತಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಇದ್ದರು.

ಬಳಿಕ, ಹುಸೇನ್ ಸಾಬ್ ಹಾಗೂ ತಂಡದವರು ಹರಿನಾಮ ಸಂಕೀರ್ತನೆ ಹಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT