ಮೈಸೂರು: ನಗರದ ಶಿವಾಲಯಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಶನಿವಾರ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.

ಜನರು ಶ್ರದ್ಧಾಭಕ್ತಿಯಿಂದ ಶಿವನ ಸ್ಮರಣೆ ಮಾಡಿದರು. ರಾತ್ರಿ ಜಾಗರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದೇವಾಲಯಗಳನ್ನು ಹೂಗಳಿಂದ ಮತ್ತು ಶಿವನಿಗೆ ಪ್ರಿಯವಾದ ಬಿಲ್ವಪತ್ರೆಯಿಂದ ಅಲಂಕರಿಸಲಾಗಿತ್ತು. ಮುಂಜಾನೆಯಿಂದಲೇ ರುದ್ರಾಭಿಷೇಕ, ಕ್ಷೀರಾಭಿಷೇಕ, ಬಿಲ್ವಪತ್ರೆ ಅರ್ಪಣೆ, ಮಹಾಮಂಗಳಾರತಿ ಸೇರಿದಂತೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಶಿವನ ದರ್ಶನ ಪಡೆಯಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ತಡರಾತ್ರಿವರೆಗೂ ಭಕ್ತರ ಸಾಲು ಕಂಡುಬಂತು.

ನೂಕುನುಗ್ಗಲು ಉಂಟಾಗದಂತೆ ನೋಡಿಕೊಳ್ಳಲು, ಪ್ರಸಾದ ವಿನಿಯೋಗ ಮಾಡಲು ವಿಶೇಷ ಕೌಂಟರ್ ತೆರೆಯಲಾಗಿತ್ತು. ಜಾಗರಣೆ ಪ್ರಯುಕ್ತ ದೇವಾಲಯಗಳಲ್ಲಿ ಭಕ್ತರಿಗೆ ಶಿವನಾಮ ಸ್ಮರಣೆ, ಜಪ–ತಪಗಳಿಗೆ ವಿಶೇಷ ವ್ಯವಸ್ಥೆಯೂ ಕಲ್ಪಿಸಲಾಗಿತ್ತು.

ಅಂಬಾವಿಲಾಸ ಅರಮನೆಯ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇಗುಲದಲ್ಲಿ ಚಿನ್ನದ ಕೊಳಗವನ್ನು ಶಿವಲಿಂಗಕ್ಕೆ ಧಾರಣೆ ಮಾಡಲಾಗಿತ್ತು. ಇದನ್ನು ಕಣ್ತುಂಬಿಕೊಳ್ಳಲು ಭಕ್ತರು ಬೆಳಿಗ್ಗೆಯಿಂದಲೇ ಬಂದರು.

ರಾಮಾನುಜ ರಸ್ತೆಯ ಕಾಮೇಶ್ವರ-ಕಾಮೇಶ್ವರಿ ದೇವಸ್ಥಾನ, ಚಾಮರಾಜಪುರಂನ ಪ್ರಸನ್ನ ವಿಶ್ವೇಶ್ವರ ದೇವಸ್ಥಾನ, ಕೆ.ಜಿ.ಕೊಪ್ಪಲಿನ ಚಂದ್ರಮೌಳೇಶ್ವರ ದೇವಸ್ಥಾನ, ವಿದ್ಯಾರಣ್ಯಪುರಂನ ರಾಮಲಿಂಗೇಶ್ವರ ದೇಗುಲ, ಮಹದೇಶ್ವರ ಸ್ವಾಮಿ ದೇಗುಲ, ಅಶೋಕಪುರಂನ ಮುಕ್ಕಣ್ಣೇಶ್ವರ ಸ್ವಾಮಿ ದೇಗುಲ, ಬನ್ನೂರು ರಸ್ತೆಯ ಮಲೆಮಹದೇಶ್ವರ ದೇವಸ್ಥಾನ, ಕುಂಬಾರಕೊಪ್ಪಲಿನ ಮಹದೇಶ್ವರಸ್ವಾಮಿ ದೇವಸ್ಥಾನ, ಲಷ್ಕರ್ ಮೊಹಲ್ಲಾದ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ, ದಿವಾನ್ಸ್ ರಸ್ತೆಯಲ್ಲಿರುವ ಅಮೃತೇಶ್ವರ ದೇವಸ್ಥಾನ, ಬೋಗಾದಿ ರಿಂಗ್ ರಸ್ತೆಯಲ್ಲಿರುವ ನಾಗೇಶ್ವರ ಭೋಗೇಶ್ವರಸ್ವಾಮಿ ದೇವಾಲಯ, ಸಿದ್ದಪ್ಪ ಚೌಕ, ಹೊಸಕೇರಿ, ಮಲೆಮಹದೇಶ್ವರ ರಸ್ತೆ ಸೇರಿದಂತೆ ನಗರದ ವಿವಿಧ ಶಿವ ದೇಗುಲಗಳಲ್ಲಿ ವಿಶೇಷ ಪೂಜೆ ನಡೆದವು.

ಮಾತೃಮಂಡಳಿ ವೃತ್ತದಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದ ಮುಂದೆ ಭಕ್ತರ ಸಾಲು ರಸ್ತೆಯುದ್ದಕ್ಕೂ ಇತ್ತು. ಚಾಮುಂಡಿಬೆಟ್ಟದ ಮಹಾಬಲೇಶ್ವರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು.

‘ರಾಮಾನುಜ ರಸ್ತೆಯಲ್ಲಿರುವ ಕಾಮೇಶ್ವರ–ಕಾಮೇಶ್ವರಿ ದೇವಸ್ಥಾನ 1954ರಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದು, ಕೆತ್ತನೆ ವಿಶಿಷ್ಟವಾಗಿದೆ. ದೇವಸ್ಥಾನದ ಆವರಣದ ಸುತ್ತಲೂ ಈಶ್ವರನ 25 ಲೀಲೆಗಳನ್ನು ಚಿತ್ರಿಸಲಾಗಿದೆ. ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ಶಿವರಾತ್ರಿ ಹಬ್ಬ ಆಚರಿಸಲಾಗುತ್ತದೆ. ಬೆಳಿಗ್ಗೆ ಏಕಾದಶವಾರ ರುದ್ರಾಭಿಷೇಕ, ಮಧ್ಯಾಹ್ನ ಅಮ್ಮನವರ ಪ್ರಕಾರೋತ್ಸವ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಪ್ರಸಾದ ವಿತರಣೆಯನ್ನು ಸಮಿತಿಯಿಂದ ಮಾಡಲಾಗಿತ್ತು. ಭಕ್ತರು ಮುಂಜಾನೆಯಿಂದಲೇ ಭಕ್ತರು ದೇವರ ದರ್ಶನ ಪಡೆದಿದ್ದಾರೆ’ ಎಂದು ದೇವಾಲಯದ ಸಹ ಕಾರ್ಯದರ್ಶಿ ಬಾಲಾಜಿ ಪಂತ್ ‘ಪ್ರಜಾವಾಣಿ’ಗೆ ತಿಳಿಸಿದರು.

ಈಶ್ವರನಿಗೆ ಪೂಜೆ: ನಗರದ ಉದಯಗಿರಿಯ ರಾಮಧಾಮದಲ್ಲಿ ಶಿವರಾತ್ರಿ ಅಂಗವಾಗಿ ಶನಿವಾರ ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಈಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇದೇ ವೇಳೆ ಸಾಮೂಹಿಕ ಮೃತ್ಯುಂಜಯ ಹೋಮ ಹಾಗೂ ರುದ್ರಾಭಿಷೇಕವು ಕೃಷ್ಣ ಮಿತ್ರ ಮಂಡಳಿಯ ಅಧ್ಯಕ್ಷ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ನೆರೆವೇರಿತು. ಆರ್.ವಾಸುದೇವ್ ಭಟ್, ಜಯರಾಮ್ ಭಟ್, ಎಂ.ಕೆ.ಪುರಾಣಿಕ್, ರವಿ ಶಾಸ್ತ್ರಿ, ಪಿ.ಎಸ್.ಗೋಪಾಲಕೃಷ್ಣರಾವ್, ರಮೇಶ್ ಇದ್ದರು.

ಶುಭಾಶಯ ಫ್ಲೆಕ್ಸ್: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಮುಖಂಡರು ಶುಭಾಶಯ ಕೋರುವ ಫ್ಲೆಕ್ಸ್ಗಳನ್ನು ದೇವಸ್ಥಾನದ ಆವರಣದಲ್ಲಿ ಹಾಕಿದ್ದರು.

ತ್ರಿನೇಶ್ವರಸ್ವಾಮಿ ದೇವಾಲಯಕ್ಕೆ ಯದುವೀರ್ ಭೇಟಿ

ಮೈಸೂರು: ಮಹಾಶಿವರಾತ್ರಿ ಅಂಗವಾಗಿ ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ನಿ ತ್ರಿಷಿಕಾ ಕುಮಾರಿ, ಪುತ್ರ ಆದ್ಯವೀರ್ ಜೊತೆ ಬಂದು ಶಿವನ ದರ್ಶನ ಪಡೆದರು.

ತ್ರಿನೇಶ್ವರ ಲಿಂಗಕ್ಕೆ ಧರಿಸಿದ್ದ ಚಿನ್ನದ ಕೊಳಗ (ಮುಖವಾಡ)ಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಭಕ್ತರಿಗೆ ಪ್ರಸಾದ ವಿತರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲಾ ರಾಜರೂ ದೇವಾಲಯಕ್ಕೆ ಬಹಳಷ್ಟು ಕೊಡುಗೆ ಕೊಟ್ಟಿದ್ದಾರೆ. ಪುರಾತನ ದೇವಾಲಯ ಇದಾಗಿದ್ದು, ಪ್ರತಿ ವರ್ಷವೂ ತ್ರಿನೇಶ್ವರ ದೇವರಿಗೆ ಪೂಜೆ ಸಲ್ಲಿಸುತ್ತೇವೆ. ಶಿವರಾತ್ರಿ ಹಬ್ಬವನ್ನು ಎಲ್ಲರಂತೆ ನಮ್ಮ ಮನೆಯಲ್ಲೂ ಆಚರಿಸುತ್ತೇವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.