ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುತ್ತೂರು ಶ್ರೀ ಆಶೀರ್ವಾದ ಪಡೆದ ಮಲ್ಲಿಕಾರ್ಜುನ ಖರ್ಗೆ

Last Updated 5 ಅಕ್ಟೋಬರ್ 2022, 15:27 IST
ಅಕ್ಷರ ಗಾತ್ರ

ಮೈಸೂರು: ಎಐಸಿಸಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಇಲ್ಲಿನ ಚಾಮುಂಡಿಬೆಟ್ಟದ ಪಾದದಲ್ಲಿರುವ ಸುತ್ತೂರು ಮಠಕ್ಕೆ ಬುಧವಾರ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.

ಶಾಸಕ ಎಚ್‌.ಪಿ.ಮಂಜುನಾಥ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯುಣ ಇದ್ದರು. ರಾಹುಲ್‌ ಗಾಂಧಿ ನಡೆಸುತ್ತಿರುವ ಭಾರತ್‌ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಅವರು ಆಗಮಿಸಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರದಿಂದ ಗುರುವಾರ ಮುಂದುವರಿಯಲಿರುವ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ನಡೆಯಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT