ನಂಜನಗೂಡು: ನಗರದ ಆಶೀರ್ವಾದ್ ಹೋಟೆಲ್ ಸಮೀಪದ ಮುಖ್ಯ ರಸ್ತೆಯಲ್ಲಿ ಈಚೆಗೆ ಸ್ಕೂಟರ್‌ನಲ್ಲಿ ವೀಲಿಂಗ್ ಮಾಡುತ್ತಿದ್ದ ಯುವಕನನ್ನು ಬಂಧಿಸಿ, ಸ್ಕೂಟರ್‌ನ್ನು ಸಂಚಾರ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ರಸ್ತೆಯಲ್ಲಿ ವೀಲಿಂಗ್ ಮಾಡುವವರ ಮೇಲೆ ಕಠಿಣ ಕ್ರಮ ವಹಿಸಲಾಗುವುದು’ ಎಂದು ಸಂಚಾರ ವಿಭಾಗದ ಪಿಎಸ್‌ಐ ಯಾಸ್ಮಿನ್ ತಾಜ್ ಎಚ್ಚರಿಕೆ ನೀಡಿದ್ದಾರೆ.