‘ನೇಮಕಕ್ಕೆ ಸಭೆಯಲ್ಲಿ ತೀರ್ಮಾನ’
‘ಕೇಂದ್ರದ ನಿರ್ದೇಶಕ ಹುದ್ದೆಗೆ ನೇಮಕ ಮಾಡಲು ವ್ಯವಸ್ಥಾಪನ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗುವುದು’ ಎಂದು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. ‘ವಿಷಯ ತಜ್ಞರನ್ನೇ ಹಿಂದೆ ಪ್ರಭಾರ ನಿರ್ದೇಶಕರಾಗಿ ನಿಯೋಜಿಸಲಾಗಿತ್ತು. ಅವರ ಅವಧಿ ಮುಗಿಯುತ್ತಿದ್ದಂತೆ ಐದು ವರ್ಷದ ಅವಧಿಗೆ ನಿರ್ದೇಶಕರನ್ನು ಆಯ್ಕೆ ಮಾಡಲು ಸಭೆಯು ನಿರ್ಣಯ ತೆಗೆದುಕೊಳ್ಳಲಿದೆ’ ಎಂದರು.