ಮೈಸೂರು: ಮಂಗಳಾ ಸೋಮಶೇಖರ್ ಅವರನ್ನು ಬಿಜೆಪಿ ಮೈಸೂರು ಗ್ರಾಮಾಂತರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಈ ಆದೇಶ ಹೊರಡಿಸಿದ್ದಾರೆ. ಪಕ್ಷದೊಳಗೆ ಈ ಸ್ಥಾನ ಪಡೆಯಲು ದೊಡ್ಡ ಪೈಪೋಟಿಯೇ ನಡೆದಿತ್ತು.

ಹಿಂದೆ ಅಧ್ಯಕ್ಷರಾಗಿದ್ದ ಎಸ್.ಡಿ.ಮಹೇಂದ್ರ ಅವರನ್ನು ಎಪಿಎಂಸಿ ಅಧ್ಯಕ್ಷರ ಚುನಾವಣೆ ಸಂಬಂಧಿಸಿದ ವಿವಾದದಲ್ಲಿ ಕೆಳಗಿಳಿಸಿದ ಪರಿಣಾಮ ಈ ಸ್ಥಾನ ಖಾಲಿ ಉಳಿದಿತ್ತು.

ನಂಜನಗೂಡು ತಾಲ್ಲೂಕು ಹುಲ್ಲಹಳ್ಳಿ ಗ್ರಾಮದ ಮಂಗಳಾ ಅವರು ಜಿಲ್ಲಾ ಪಂಚಾಯಿತಿ ಸದಸ್ಯೆ ಕೂಡ. ಅಲ್ಲದೇ, ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮೊದಲ ಮಹಿಳೆ.

‘ಗ್ರಾಮ ಪಂಚಾಯಿತಿ ಚುನಾವಣೆ ನನ್ನ ಮುಂದಿರುವ ಮೊದಲ ಸವಾಲು. ಉತ್ತಮವಾಗಿ ಪಕ್ಷ ಸಂಘಟನೆ ಮಾಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿಕೊಡಲು ಪ್ರಯತ್ನಿಸುತ್ತೇನೆ’ ಎಂದು ಮಂಗಳಾ ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

‘12 ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ. ಮಹಿಳಾ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯೆಯಾಗಿದ್ದೆ. ಎರಡು ಬಾರಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಆಗಿದ್ದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.