ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು | ಮಾರ್ಬಳ್ಳಿ ಗ್ರಾಮದಲ್ಲಿ ಒಬ್ಬರಿಗೆ ಕಾಲರಾ ದೃಢ

Published 4 ಜೂನ್ 2024, 14:09 IST
Last Updated 4 ಜೂನ್ 2024, 14:09 IST
ಅಕ್ಷರ ಗಾತ್ರ

ಮೈಸೂರು: ತಾಲ್ಲೂಕಿನ ಮಾರ್ಬಳ್ಳಿ ಗ್ರಾಮದಲ್ಲಿ ವಿಷಾಹಾರ ಸೇವಿಸಿ ವಾಂತಿ, ಭೇದಿಯಾದವರ ಸಂಖ್ಯೆ 56ಕ್ಕೆ ಏರಿಕೆಯಾಗಿದ್ದು, ಮಂಗಳವಾರ 10 ಜನ ಚಿಕಿತ್ಸೆಗೆ ಒಳಗಾದರು. ಒಬ್ಬರಿಗೆ ಕಾಲರಾ ದೃಢಪಟ್ಟಿದೆ.

ಗ್ರಾಮದಲ್ಲಿ ಮೇ 31ರಂದು ಗ್ರಾಮಸ್ಥರೊಬ್ಬರ ಗೃಹ ಪ್ರವೇಶ ನಡೆದಿತ್ತು. ಉಳಿದಿದ್ದ ಆಹಾರ ಪದಾರ್ಥವನ್ನು ಮರುದಿನ ಬೆಳಿಗ್ಗೆ ನೆರೆ ಮನೆಯವರು ಹಾಗೂ ಸಂಬಂಧಿಕರು ಸೇವಿಸಿದ್ದರಿಂದ ವಾಂತಿ, ಭೇದಿ ಆರಂಭವಾಗಿತ್ತು. ಮಂಗಳವಾರ 6 ಜನರನ್ನು ಆಸ್ಪತ್ರೆಗೆ ಸೇರಿಸಿದ್ದು, ಒಟ್ಟು 30 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರದ ಬಳಿಕ ಜಿಲ್ಲಾಸ್ಪತ್ರೆಯಲ್ಲಿ 25, ಚೆಲುವಾಂಬ ಆಸ್ಪತ್ರೆಯಲ್ಲಿ ಮೂವರು, ಕೆ.ಆರ್‌.ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ತಲಾ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. 6 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT