ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿ.ನರಸೀಪುರ | ಮರುಡೇಶ್ವರ ಸ್ವಾಮಿ ರಥೋತ್ಸವ

Published 3 ಏಪ್ರಿಲ್ 2024, 14:19 IST
Last Updated 3 ಏಪ್ರಿಲ್ 2024, 14:19 IST
ಅಕ್ಷರ ಗಾತ್ರ

ತಿ.ನರಸೀಪುರ: ತಾಲ್ಲೂಕಿನ ಮಾದಾಪುರ ಸಮೀಪದ ಮರುಡೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮರುಡೇಶ್ವರ ಸ್ವಾಮಿ ರಥೋತ್ಸವ ಬುಧವಾರ ವಿಜೃಂಭಣೆಯಿಂದ ಜರುಗಿತು.

ಕಾವೇರಿ ನದಿ ತೀರದ ಮರಡಿ ಗುಡ್ಡದಲ್ಲಿ ನೆಲೆಸಿರುವ ಮುರುಡೇಶ್ವರ ಕ್ಷೇತ್ರವು ಪ್ರಸಿದ್ಧವಾಗಿದೆ. ಪ್ರತಿ ವರ್ಷ ಮಾರ್ಚ್– ಏಪ್ರಿಲ್‌ನಲ್ಲಿ ಮರುಡೇಶ್ವರ ಉತ್ಸವದ ಅಂಗವಾಗಿ ದೇವಾಲಯದಲ್ಲಿ ಅರ್ಚಕರ ಸಮೂಹದಿಂದ ಮುಂಜಾನೆಯಿಂದಲೇ ದೇವರಿಗೆ ವಿಶೇಷ, ಪೂಜೆ, ಅಲಂಕಾರ, ಅಭಿಷೇಕಗಳು ನಡೆದವು. ಬಳಿಕ, ತಹಶೀಲ್ದಾರ್ ಸುರೇಶ್ ಆಚಾರ್ ಉಪಸ್ಥಿತಿಯಲ್ಲಿ ವಿಘ್ನೇಶ್ವರ, ಸುಬ್ರಹ್ಮಣ್ಯೇಶ್ವರ ಹಾಗೂ ಮರುಡೇಶ್ವರ ಬ್ರಹ್ಮ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಮಧ್ಯಾಹ್ನ 1.45ಕ್ಕೆ ಚಾಲನೆ ನೀಡಲಾಯಿತು.

ಸಹಸ್ರಾರು ಭಕ್ತರ ಜೈಕಾರದೊಡನೆ ಮಂಗಳವಾದ್ಯ, ವೀರಭದ್ರ ಕುಣಿತದೊಡನೆ ರಥಗಳು ರಥದ ಬೀದಿಯಲ್ಲಿ ಸಾಗಿದವು. ಭಕ್ತರು ಹಣ್ಣು ದವನ ಎಸೆದು ಭಕ್ತಿ ಸಮರ್ಪಿಸಿದರು. ಸೇವಾರ್ಥದಾರರು ಅರವಟ್ಟಿಗೆಯಲ್ಲಿ ಮಜ್ಜಿಗೆ, ಪಾನಕ ಹಾಗೂ ಕೋಸಂಬರಿಯನ್ನು ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT