ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಇನ್ನಿತರೆ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

ಸಾರ್ವಜನಿಕ ಮತ್ತು ಸರ್ಕಾರಿ ಕಚೇರಿಗಳಿಗೆ ಅತಿ ಅವಶ್ಯವಿರುವ ಹಾಗೂ ತುರ್ತು ಸಂದರ್ಭಗಳಲ್ಲಿ ಮಾತ್ರ ಭೇಟಿ ನೀಡಬೇಕು. ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರಬೇಕು. ಕಚೇರಿ ಪ್ರವೇಶಿಸುವ ಮೊದಲು ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್ ಬಳಸಿ ಶುಚಿಗೊಳಿಸುವುದು ಅತ್ಯವಶ್ಯಕ ಎಂದಿದ್ದಾರೆ.

ಕೊರೊನಾ ವೈರಾಣು ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಅಧಿಕಾರಿ/ನೌಕರರು ಹಾಗೂ ಅವರ ಕುಟುಂಬದವರ ಆರೋಗ್ಯದ ಸುರಕ್ಷತೆಯ ಹಿತದೃಷ್ಟಿಯಿಂದ ಸಾರ್ವಜನಿಕರು ಎಲ್ಲಾ ಮುಂಜಾಗ್ರತಾ ಕ್ರಮ ಪಾಲಿಸುವ ಮೂಲಕ ಸಹಕಾರ ನೀಡಿ ಎಂದು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.