ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಜನಗೂಡಿನಲ್ಲಿ ‘ಮಾಂಗಲ್ಯ ಭಾಗ್ಯ’ ಜ.31ಕ್ಕೆ: ಜೋಡಿಗೆ ₹55 ಸಾವಿರ ಪ್ರೋತ್ಸಾಹಧನ

Published 29 ಡಿಸೆಂಬರ್ 2023, 14:01 IST
Last Updated 29 ಡಿಸೆಂಬರ್ 2023, 14:01 IST
ಅಕ್ಷರ ಗಾತ್ರ

ಮೈಸೂರು: ‘ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಜಿಲ್ಲಾಡಳಿತದಿಂದ ಜ.31ರಂದು ‘ಮಾಂಗಲ್ಯ ಭಾಗ್ಯ’ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರು ನೋಂದಾಯಿಸಬಹುದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಲೋಕನಾಥ್ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ವಿವಾಹಕ್ಕೆ ಅಗತ್ಯ ವಸ್ತುಗಳನ್ನು ಖರೀದಿಸಲು ವರನಿಗೆ ₹5 ಸಾವಿರ, ವಧುವಿಗೆ ₹10 ಸಾವಿರ ಹಾಗೂ ಚಿನ್ನದ ತಾಳಿ, 2 ಚಿನ್ನದ ಗುಂಡು ಖರೀದಿಸಲು ₹40 ಸಾವಿರ ಸೇರಿದಂತೆ ಒಂದು ಜೋಡಿಗೆ ಒಟ್ಟು ₹55 ಸಾವಿರ ಪ್ರೋತ್ಸಾಹಧನ ನೀಡಲಾಗುವುದು’ ಎಂದು ತಿಳಿಸಿದರು.

‘ಅರ್ಜಿಗಳನ್ನು ತಾಲ್ಲೂಕು ಕಚೇರಿಗಳಲ್ಲಿ, ಜಿಲ್ಲೆಯ ‘ಎ’ ಅಥವಾ ‘ಬಿ’ ಗ್ರೇಡ್ ದೇವಾಲಯಗಳಲ್ಲಿ ಅಥವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಡೆದು ಜ.13ರೊಳಗೆ ಸಲ್ಲಿಸಬೇಕು. ನಂತರ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಬೇಕು’ ಎಂದರು.

‘ನೋಂದಾಯಿಸಿದ ವಧು–ವರರ ಜನ್ಮ ದಿನಾಂಕವನ್ನು ಪರಿಶೀಲಿಸಬೇಕು. ವಧುವಿಗೆ 18 ವರ್ಷ ಹಾಗೂ ವರನಿಗೆ 21 ವರ್ಷ ತುಂಬಿರಬೇಕು. ವಯಸ್ಸಿನ ದೃಢೀಕರಣಕ್ಕೆ ಜನನ ಪ್ರಮಾಣಪತ್ರ ಅಥವಾ ಎಸ್ಸೆಸ್ಸೆಲ್ಸಿ ಅಂಕಪಟ್ಟಿ ಪರಿಶೀಲಿಸಬೇಕು. ವಧು–ವರರು ಅನಕ್ಷರಸ್ಥರಾಗಿದ್ದರೆ ತಾಲ್ಲೂಕು ವೈದ್ಯಾಧಿಕಾರಿಗಳಿಂದ ವಯಸ್ಸಿನ ದೃಢೀಕರಣ ಪತ್ರ ನೀಡಬೇಕು. ಸಾಮೂಹಿಕ ವಿವಾಹವಾದ ನಂತರ ವಿವಾಹವನ್ನು ನೋಂದಣಿ ಮಾಡಿಸಬೇಕು. ನ್ಯಾಯಾಲಯದಲ್ಲಿ ಯಾವುದೇ ಪ್ರಕರಣಗಳಿಲ್ಲ ಹಾಗೂ ಕ್ರಿಮಿನಲ್ ಪ್ರಕರಣಗಳಿಲ್ಲ ಎಂಬ ಬಗ್ಗೆ ಲಿಖಿತ ಹೇಳಿಕೆ ಪಡೆಯಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಕಾರ್ಯಕ್ರಮದ ಬಗ್ಗೆ ತಾಲ್ಲೂಕು ಮಟ್ಟದಲ್ಲಿ ಜಾಹೀರಾತು ಫಲಕಗಳು, ವಿವಿಧ ದೇವಸ್ಥಾನಗಳಲ್ಲಿ ಪ್ಲೆಕ್ಸ್‌ಗಳು ಹಾಗೂ ಕರಪತ್ರಗಳ ಮೂಲಕ ಪ್ರಚಾರ ನೀಡಬೇಕು’ ಎಂದರು.

ಮುಜರಾಯಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT