ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರೇಂದ್ರ ಹೆಗ್ಗಡೆ ಸೇವೆ ಅನನ್ಯ: ಮೋಕ್ಷಪತಿ ಸ್ವಾಮೀಜಿ

Published 2 ಫೆಬ್ರುವರಿ 2024, 15:36 IST
Last Updated 2 ಫೆಬ್ರುವರಿ 2024, 15:36 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ‘ಈ ನಾಡಿಗೆ ವೀರೇಂದ್ರ ಹೆಗ್ಗಡೆ ಅವರು ಸರ್ಕಾರ ಮಾಡದಿರುವ ಕೆಲಸವನ್ನು ಮಾಡುವ ಮೂಲಕ ಜನಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ’ ಎಂದು ರಾವಂದೂರು ಮುರುಘಾ ಮಠದ ಮೋಕ್ಷಪತಿ ಸ್ವಾಮೀಜಿ ತಿಳಿಸಿದರು.

ತಾಲ್ಲೂಕಿನ ಚಿಟ್ಟೆನಹಳ್ಳಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ಆವರಣದಲ್ಲಿ ಗುರುವಾರ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹುಣಸವಾಡಿ ವಲಯ ಬಿ.ಸಿ ಟ್ರಸ್ಟ್ ಹಾಗೂ ತಾಲ್ಲೂಕು ಪ್ರಗತಿ ಬಂಧು ಸ್ವ ಸ್ವಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಭವ್ಯ ಭಾರತ ಸಂಸ್ಕೃತಿಯ ಪರಂಪರೆಯಲ್ಲಿರುವ ನಾವು ಧ್ಯಾನದಿಂದ ಮಾತ್ರ ದೇವರನ್ನು ಕಾಣಲು ಸಾಧ್ಯ. ದೇವನೊಬ್ಬ ನಾಮ ಹಲವು. ದೇಹ, ವರ್ಣ, ರೂಪವಿಲ್ಲದ ಮನಸಿನ ಭಾವನೆಯೇ ದೇವರು. ಪ್ರಕೃತಿದತ್ತವಾಗಿ ದೊರಕುವ ಎಲ್ಲವನ್ನು ಒಳ್ಳೆಯ ರೀತಿಯಲ್ಲಿ ಸದ್ಭಳಕೆ ಮಾಡಿಕೊಂಡು ಜ್ಞಾನ ಬಲವನ್ನು ವೃದ್ಧಿಸಿಕೊಳ್ಳಬೇಕು’ ಎಂದರು.

ಬಿ.ಸಿ. ಟ್ರಸ್ಟ್ ನಿರ್ದೇಶಕಿ ಲೀಲಾವತಿ ಮಾತನಾಡಿ, ‘ಧರ್ಮಸ್ಥಳ ಗ್ರಾಮಭಿವೃದ್ಧಿ ಸಂಸ್ಥೆಯಿಂದ ಕೆರೆ ಹೂಳೆತ್ತುವಿಕೆ ಕಾರ್ಯ ಯೋಜನೆಯಡಿಯಲ್ಲಿ ಒಟ್ಟು 657 ಕೆರೆಗಳ ಹೂಳೆತ್ತುವ ಕಾರ್ಯ ಮಾಡಿದ್ದೇವೆ. 3 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಸ್ವ ಉದ್ಯೋಗ, ಅರೋಗ್ಯ ಸುರಕ್ಷಾ, ಹಿಂದೂ ರುದ್ರ ಭೂಮಿ, ಸಂಪೂರ್ಣ ಸುರಕ್ಷಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಗ್ರಾಮಾಭಿವೃದ್ಧಿ ಸಂಘದಿಂದ ನೀಡುತ್ತಿದ್ದೇವೆ’ ಎಂದರು.

ಚಿಟ್ಟೆನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ, ಮೈಮುಲ್ ನಿರ್ದೇಶಕ ಎಚ್.ಡಿ.ರಾಜೇಂದ್ರ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್.ರವಿ, ಸಚ್ಚಿದಾನಂದ, ಜಾನಕಮ್ಮ, ಶಿವಮ್ಮ, ಕುಮಾರಿ, ಮಲ್ಲಿಕಾರ್ಜುನ್, ಮೇಲ್ವಿಚಾರಕರಾದ ಶೀಲಾ, ಯೋಜನಾಧಿಕಾರಿ ಸುರೇಶ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT