ತಲಕಾಡಿನ ಗ್ರಾಮ ಪಂಚಾಯಿತಿ ಸಿಬ್ಬಂದಿ ಪ್ರವಾಸಿಗರಿಂದ ಸುಂಕ ವಸೂಲಿ ಮಾಡಿದರು
ನದಿಯಲ್ಲಿ ಮುಳುಗಿ ಸಾಯುವವರ ಸಂಖ್ಯೆ ಹೆಚ್ಚಿದ್ದರೂ ಪ್ರವಾಸಿಗರ ರಕ್ಷಣೆಗೆ ಅರಣ್ಯ ಇಲಾಖೆ ಹಾಗೂ ಗ್ರಾ.ಪಂ ಅಧಿಕಾರಿಗಳು ಗಮನ ಹರಿಸಿಲ್ಲ.
- ಎಚ್.ರಾಜು, ಕಾರ್ಯಾಧ್ಯಕ್ಷ ಕಸಾಪ ತಲಕಾಡು ಘಟಕ
ಬ್ಯಾರಿಕೇಡ್ ಅಳವಡಿಕೆ
‘ಈಗಾಗಲೇ ಮುನ್ನೆಚ್ಚರಿಕೆಯಾಗಿ ಬ್ಯಾರಿಕೇಡ್ ಅಳವಡಿಸಿದ್ದು ಭಾನುವಾರದಂದು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮಾಲಂಗಿ ಭಾಗದಲ್ಲಿ ನೂತನ ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಆ ಕಡೆಯಿಂದ ಬರುವ ಪ್ರವಾಸಿಗರು ಅನಾಹುತಕ್ಕೆ ಸಿಲುಕುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮುನ್ನೆಚ್ಚರಿಕೆ ವಹಿಸಲಾಗುವುದು’ ಎಂದು ತಲಕಾಡು ಅರಣ್ಯ ಅಧಿಕಾರಿ ನಾಗರಾಜು ತಿಳಿಸಿದರು.