ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೇಕೆದಾಟು | ಸರ್ಕಾರ ಕಾರ್ಯಪ್ರವೃತ್ತವಾಗಲಿ: ಬಿಜೆಪಿ ಮುಖಂಡ ಜಯಪ್ರಕಾಶ್‌

Published 11 ಮೇ 2024, 13:52 IST
Last Updated 11 ಮೇ 2024, 13:52 IST
ಅಕ್ಷರ ಗಾತ್ರ

ಮೈಸೂರು: ‘ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ತಕ್ಷಣವೇ ಪ್ರಾರಂಭಿಸಲು ಸರ್ಕಾರ ಕಾರ್ಯ ಪ್ರವೃತ್ತವಾಗಬೇಕು’ ಎಂದು ಬಿಜೆಪಿ ಮುಖಂಡ, ಇಲ್ಲಿನ ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್.ಜಯಪ್ರಕಾಶ್‌ ಒತ್ತಾಯಿಸಿದರು.

ನಗರದ ದೊಡ್ಡ ಗಡಿಯಾರ ಮುಂಭಾಗ ಕಾವೇರಿ ಕ್ರಿಯಾ ಸಮಿತಿಯಿಂದ ಶನಿವಾರ ಆಯೋಜಿಸಿದ್ದ ಸತ್ಯಾಗ್ರಹ ಹಾಗೂ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ತಮಿಳುನಾಡು ಸರ್ಕಾರವು ಯಾವುದೇ ಅನುಮತಿಯನ್ನೂ ಪಡೆಯದೇ ಆರಂಭಿಸಿರುವ ಕಾವೇರಿ ನೀರಿನ ಯೋಜನೆಗಳ ಕಾಮಗಾರಿಗಳನ್ನು ನಿಲ್ಲಿಸಲು ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದರು.

‘ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಶಾಶ್ವತ ಪರಿಹಾರ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ತಿಳಿಸಿದರು.

ಕಾವೇರಿ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕ ಮೂಗೂರು ನಂಜುಂಡಸ್ವಾಮಿ, ಮುಖಂಡರಾದ ಸುರೇಶ್‌ ಗೌಡ, ತೇಜಸ್ವಿನಿ ಲೋಕೇಶ್‌ ಗೌಡ, ಅಶೋಕ್‌, ಮಂಜುಳಾ, ವನಿತಾ, ಹನುಮಂತೇಗೌಡ, ನೇಹಾ, ಜಿ. ನಾಗರಾಜು, ವರಕೋಡು ಕೃಷ್ಣೇಗೌಡ, ಶಿವಕುಮಾರ್, ವೆಂಕಟಮ್ಮ, ಸಿಂಧುವಳ್ಳಿ ಶಿವಕುಮಾರ್, ಸೋಮಶೇಖರ್, ನಂದೀಶ್, ಭಾನು‍ಪ್ರಕಾಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT