ಮೈಸೂರು: ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ವಿರುದ್ಧ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಅವರು, ಖಾಲಿ ಕೊಡಗಳ ಹಾರವನ್ನು ಕುತ್ತಿಗೆಗೆ ಹಾಕಿಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ಮೇಕೆದಾಟು ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸ್ಟಾಲಿನ್ ಪತ್ರ ಬರೆದಿರುವುದು ಸರಿಯಲ್ಲ ಎಂದು ಖಂಡಿಸಿದ ಅವರು, ಸರ್ಕಾರ ಕೂಡಲೇ ಈ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ತಮಿಳುನಾಡು ಸರ್ಕಾರವು ಕಾವೇರಿ ನದಿ ನೀರಿನ 45 ಟಿಎಂಸಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳುತ್ತಿರುವುದು ಸಹ ಸರಿಯಲ್ಲ ಎಂದು ಅವರು ಖಂಡಿಸಿದರು.

ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ಸಿ.ಜೆ.ಗಂಗಾಧರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.