ಮೈಸೂರು: ‘ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ ನವೆಂಬರ್ ತೀರ್ಪಿನ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದನ್ನು ಸ್ವಾಗತಿಸುತ್ತೇವೆ’ ಎಂದು ಕಾವೇರಿ ಕ್ರಿಯಾ ಸಮಿತಿಯ ಅಧ್ಯಕ್ಷ ಜಯಪ್ರಕಾಶ್ (ಜೆಪಿ) ತಿಳಿಸಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ– ತಮಿಳುನಾಡು ಜನರು ಸಹೋದರರಂತೆ ಬದುಕುವುದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಇಷ್ಟವಿಲ್ಲವೆಂದು ಕಾಣಿಸುತ್ತಿದೆ. ಹೀಗಾಗಿಯೇ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಇಂಥದ್ದಕ್ಕೆಲ್ಲಾ ನಮ್ಮ ಸರ್ಕಾರ ಅವರಿಗೆ ಮಣಿಯಬಾರದು’ ಎಂದು ಒತ್ತಾಯಿಸಿದರು.

‘ತಮಿಳುನಾಡಿಗೆ 177 ಟಿಎಂಸಿ ನೀರು ಹರಿಸುವಂತೆ ನೀಡುವ ತೀರ್ಪಿನಿಂದ ರಾಜ್ಯಕ್ಕೆ ಈಗಾಗಲೇ ಅನ್ಯಾಯವಾಗಿದೆ. ಆ ತೀರ್ಪನ್ನು ಕಾವೇರಿ ಕ್ರಿಯಾ ಸಮಿತಿಯು ಹಿಂದಿನಿಂದಲೂ ವಿರೋಧಿಸುತ್ತಲೇ ಬಂದಿದೆ. ಅವೈಜ್ಞಾನಿಕವಾದ ತೀರ್ಪು ರದ್ದುಪಡಿಸಿ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡಬೇಕೆಂಂದು ಒತ್ತಾಯಿಸುತ್ತಲೇ ಬಂದಿದ್ದೇವೆ. ರಾಜ್ಯ ಸರ್ಕಾರವು ಮೇಕೆದಾಟು ಯೋಜನೆಗೆ ಕೂಡಲೇ ಚಾಲನೆ ನೀಡಬೇಕು. ಕುಡಿಯುವ ಉದ್ದೇಶ ಹಾಗೂ 2 ಬೆಳೆಗಳಿಗೆ ಬೇಕಾಗುವಷ್ಟು ನೀರು ಬಳಸಿಕೊಳ್ಳಬೇಕು. ಉಳಿದ ನೀರನ್ನು ಮಾತ್ರವೇ ತಮಿಳುನಾಡಿಗೆ ಹರಿಸಬೇಕು’ ಎಂದು ಆಗ್ರಹಿಸಿದರು.

ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಪ್ರಧಾನ ಸಂಚಾಲಕ ಮೂಗೂರು ನಂಜುಂಡಸ್ವಾಮಿ, ಉಪಾಧ್ಯಕ್ಷ ಎಂ.ಜೆ. ಸುರೇಶ್ಗೌಡ, ತೇಜೇಶ್ ಲೋಕೇಶ್ಗೌಡ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.