ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಸ್‌ಸಿ, ಎಸ್‌ಟಿ ಅಭಿವೃದ್ಧಿಗೆಂದು ತಂದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆ ಹೆಸರಿನಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದರಿಂದ ಮೀಸಲಾತಿಗೆ ಕುತ್ತು ಬಂದಿದೆ. ಈ ಹಣದಲ್ಲಿ ರಾಜ್ಯದ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪಿಎಚ್.ಡಿವರೆಗಿನ ಉಚಿತ ಶಿಕ್ಷಣ ನೀಡಬಹುದಾಗಿತ್ತು. ಭೂರಹಿತ ಎಸ್‌ಸಿ, ಎಸ್‌ಟಿ ಕೃಷಿ ಕಾರ್ಮಿಕರಿಗೆ ತಲಾ ಐದು ಎಕರೆ ಜಮೀನು ಖರೀದಿಸಿ ಕೊಡಬಹುದಾಗಿತ್ತು’ ಎಂದು ಆಕ್ರೋಶ ವ್ಯಕ್ತಪಡಿಸಿದರು.