ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಶಾಸಕ ಸತ್ಯನಾರಾಯಣ ನಿಧನ

Last Updated 6 ಜೂನ್ 2019, 18:31 IST
ಅಕ್ಷರ ಗಾತ್ರ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಂ.ಸತ್ಯನಾರಾಯಣ (74) ಅನಾರೋಗ್ಯದಿಂದ ಗುರುವಾರ ರಾತ್ರಿ ಇಲ್ಲಿನ ಗುಂಗ್ರಾಲ್‌ಛತ್ರದ ಸ್ವಗೃಹದಲ್ಲಿ ನಿಧನರಾದರು.

ಇವರಿಗೆ ಪತ್ನಿ ಲಕ್ಷ್ಮಿ, ಪುತ್ರರಾದ ಅರುಣ್‌ಕುಮಾರ್, ಜಗದೀಶ್ ಹಾಗೂ ಪುತ್ರಿ ಎಸ್‌.ಸುನಿತಾ ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸೌಮ್ಯ ಸ್ವಭಾವ ವ್ಯಕ್ತಿತ್ವ: ಸತ್ಯನಾರಾಯಣ ಅವರು ಸೌಮ್ಯ ಸ್ವಭಾವದ ರಾಜಕಾರಣಿ ಎಂದೇ ಹೆಸರು ಮಾಡಿದ್ದರು. ಅವರು 2008ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು.

ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದ ಸಿದ್ದರಾಮಯ್ಯ ಅವರು ಕ್ಷೇತ್ರ ಪುನರ್‌ ವಿಂಗಡಣೆ ಕಾರಣ ಆಗ ವರುಣಾ ಕ್ಷೇತ್ರದಿಂದ ಕಣಕ್ಕಿಳಿದರು. ಹೀಗಾಗಿ, ಚಾಮುಂಡೇಶ್ವರಿಯಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸತ್ಯನಾರಾಯಣ ಸ್ಪರ್ಧಿಸಿದ್ದರು.

14,299 ಮತಗಳಿಂದ ಬಿಜೆಪಿ ಅಭ್ಯರ್ಥಿ ಸಿ.ಎನ್‌.ಮಂಜೇಗೌಡ ಅವರನ್ನು ಮಣಿಸಿ ಶಾಸಕರಾಗಿದ್ದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಸಿ.ಬಸವೇಗೌಡ ಜೆಡಿಎಸ್‌ನಿಂದ, ಮಾಜಿ ಸಚಿವ ಡಿ.ಟಿ.ಜಯಕುಮಾರ್ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದರು. ಆದರೆ, 2013ರ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡ (ಜೆಡಿಎಸ್‌) ವಿರುದ್ಧ ಪರಾಭವಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT