ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಖ್ಯಮಂತ್ರಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲಿ: ಶಾಸಕ ಜಿ.ಡಿ. ಹರೀಶ್ ಗೌಡ

Published : 24 ಸೆಪ್ಟೆಂಬರ್ 2024, 13:54 IST
Last Updated : 24 ಸೆಪ್ಟೆಂಬರ್ 2024, 13:54 IST
ಫಾಲೋ ಮಾಡಿ
Comments

ಹುಣಸೂರು: ‘ಮುಡಾ ಪ್ರಕರಣ ಸಂಬಂಧ ಹೈಕೋರ್ಟ್ ತೀರ್ಪು ಹೊರ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ಸಮಯ ಎದುರಾಗಿದೆ’ ಎಂದು ಶಾಸಕ ಜಿ.ಡಿ. ಹರೀಶ್ ಗೌಡ ತಿಳಿಸಿದರು.

‘ಹೈಕೋರ್ಟ್ ಸುದೀರ್ಘ ವಿಚಾರಣೆಯ ಬಳಿಕ ತೀರ್ಪು ನೀಡಿದ್ದು, ಮುಖ್ಯಮಂತ್ರಿಗಳು 5 ದಶಕಗಳ ನೈತಿಕ ಮೌಲ್ಯ ರಾಜಕಾರಣಕ್ಕೆ ಇಂದಿನ ತೀರ್ಪು ಹಿನ್ನಡೆಯಾಗಿದೆ. ಈ ತೀರ್ಪನ್ನು ಕಾಂಗ್ರೆಸ್ ಯಾವ ರೀತಿ ಸ್ವೀಕರಿಸುತ್ತದೆ ಎನ್ನುವುದು ಈಗಲೂ ಕುತೂಹಲವಿದೆ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ರಾಜ್ಯದ ಮುತ್ಸದ್ಧಿ ರಾಜಕಾರಣಿ ಈ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡು ಅವರ ರಾಜಕೀಯ ಜೀವನಕ್ಕೆ ಮಾದರಿಯಾಗುತ್ತಾರೆ ಎಂಬ ವಿಶ್ವಾಸವಿದೆ. ತಮ್ಮ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲದೇ ಸಾಮಾಜಿಕ ನ್ಯಾಯದಲ್ಲಿ ರಾಜಕಾರಣ ನಡೆಸಿದ್ದೇ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಭವಿಷ್ಯದ ರಾಜಕಾರಣಿಗಳಿಗೆ ಮಾದರಿಯಾದ ತೀರ್ಮಾನ ಸಿದ್ದರಾಮಯ್ಯ ಕೈಗೊಳ್ಳುವ ವಿಶ್ವಾಸ ವಿರೋಧ ಪಕ್ಷದವರಿಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT