ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಶ್ರೀವತ್ಸ ಕಚೇರಿ ಉದ್ಘಾಟನೆ

Published 7 ಮಾರ್ಚ್ 2024, 5:46 IST
Last Updated 7 ಮಾರ್ಚ್ 2024, 5:46 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್‌. ಶ್ರೀವತ್ಸ ಅವರು ನಗರಪಾಲಿಕೆ ಕೇಂದ್ರ ಕಟ್ಟಡದ ನೆಲಮಹಡಿಯಲ್ಲಿ ಅರಂಭಿಸಿರುವ ಕಚೇರಿಯನ್ನು ಬುಧವಾರ ಉದ್ಘಾಟಿಸಲಾಯಿತು.

ಶಾಸಕರಾಗಿ ಆಯ್ಕೆಯಾದ ಹಲವು ತಿಂಗಳುಗಳ ಬಳಿಕ ಅವರು ಕಚೇರಿ ಆರಂಭಿಸಿದ್ದಾರೆ.

‘ನಮ್ಮ ಕ್ಷೇತ್ರದ ಜೊತೆಗೆ ಚಾಮರಾಜ, ನರಸಿಂಹರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಸಾರ್ವಜನಿಕರು ಕೂಡ ಭೇಟಿ ನೀಡಬಹುದು. ಸ್ಥಳಾವಕಾಶದ ಕೊರತೆ ಇದ್ದಿದ್ದರಿಂದಾಗಿ ಕಚೇರಿ ತೆರೆಯುವುದು ವಿಳಂಬವಾಯಿತು. ಸಾರ್ವಜನಿಕರಿಂದ ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಚೇರಿಯ ಸಿಬ್ಬಂದಿ ಜನರ ಸಮಸ್ಯೆಗಳಿಗೆ ಕಿವಿಯಾಗುತ್ತಾರೆ’ ಎಂದರು.

ಸಂಸದ ಪ್ರತಾಪ ಸಿಂಹ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ರಾಜೇಂದ್ರ, ಮಾಜಿ ಮೇಯರ್‌ ಶಿವಕುಮಾರ್‌, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಪಿ. ಮಂಜುನಾಥ್‌, ಕರ್ನಾಟಕ ಮೃಗಾಲಯ ಪ್ರಾಧಿಕಾರ ಮಾಜಿ ಅಧ್ಯಕ್ಷ ಎಂ.ಶಿವಕುಮಾರ್, ಖಾದಿ ಮಂಡಳಿ ಮಾಜಿ ಅಧ್ಯಕ್ಷ ಕೃಷ್ಣಪ್ಪಗೌಡ, ನಗರ ಪಾಲಿಕೆ ಮಾಜಿ ಸದಸ್ಯ ಜೆ.ಎಸ್. ಜಗದೀಶ್, ಮುಖಂಡರಾದ ಸತ್ಯಾನಂದ ವಿಟ್ಟು, ಲೋಹಿತ್ ಶರ್ಮ, ಶ್ರೀನಿವಾಸ್ ಮೊದಲಾದವರು ಶಾಸಕರು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT