ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆ

ಉಮೇದುವಾರಿಕೆಗೆ ಮೇ 16 ಕಡೇ ದಿನ
Published 9 ಮೇ 2024, 13:27 IST
Last Updated 9 ಮೇ 2024, 13:27 IST
ಅಕ್ಷರ ಗಾತ್ರ

ಮೈಸೂರು: ವಿಧಾನ ಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಗುರುವಾರ ಆರಂಭಗೊಂಡಿದ್ದು, ಮೊದಲ ದಿನದಂದು ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಆರ್‌.ನಗರದ ಕೆ.ಸಿ. ಪುಟ್ಟಸಿದ್ಧಶೆಟ್ಟಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನ. 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಮೇ 20ರವರೆಗೆ ಅವಕಾಶವಿದೆ. ಜೂನ್‌ 3ರಂದು ಮತದಾನ ನಡೆಯಲಿದ್ದು, ಜೂನ್‌ 6ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

2023ರ ಡಿ.30ರಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಕ್ಷೇತ್ರ ವ್ಯಾಪ್ತಿಯಲ್ಲಿ ಈವರೆಗೆ 10,355 ಪುರುಷರು, 8,022 ಮಹಿಳೆಯರು, ಇಬ್ಬರು ಲಿಂಗತ್ವ ಅಲ್ಪಸಂಖ್ಯಾತರೂ ಸೇರಿದಂತೆ ಒಟ್ಟು 18,379 ಮತದಾರರು ನೋಂದಾಯಿಸಿಕೊಂಡಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೊಸತಾಗಿ ಹೆಸರು ನೋಂದಾಯಿಸುವವರಿಗೆ ಚುನಾವಣಾ ಅಧಿಕಾರಿಗಳು ಮೇ 6ರವರೆಗೆ ಅವಕಾಶ ನೀಡಿದ್ದರು. ಕಡೆಯ ದಿನದಲ್ಲಿ ನೂರಾರು ಅರ್ಜಿಗಳು ಸಲ್ಲಿಕೆಯಾಗಿದ್ದು, ಅಂತಿಮ ಮತದಾರರ ಪಟ್ಟಿ ಇನ್ನಷ್ಟೇ ಬಿಡುಗಡೆ ಆಗಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT