ಮೈಸೂರು: ಇಲ್ಲಿನ ಚೆಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ತಾಯಿ-ಮಕ್ಕಳ ಆರೈಕೆಗೆ ಹೆಚ್ಚು ಆದ್ಯತೆ ನೀಡಬೇಕು’ ಎಂದು ಸೂಚಿಸಿದರು.

ಶಿಶುಗಳ ಮರಣ ಪ್ರಮಾಣ ಹೆಚ್ಚಳ, ಇರುವೆ ಕಚ್ಚಿ ನವಜಾತ ಶಿಶು ಸಾವು ಆರೋಪ ಕೇಳಿಬಂದಿದ್ದು ಮೊದಲಾದ ಕಾರಣಗಳಿಂದ ಭೇಟಿ ನೀಡಿದ್ದ ಅವರು, ‘ಮೈಸೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಇಂಥ ಪ್ರಕರಣ ವರದಿಯಾಗಿರುವುದು ವಿಷಾದನೀಯ’ ಎಂದರು.

ವೈದ್ಯಾಧಿಕಾರಿಗಳು, ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದರು. ‘ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯವನ್ನು ತೋರಬಾರದು. ಇದೇ ರೀತಿಯ ಧೋರಣೆ ಮುಂದುವರಿದರೆ ಕಾನೂನು ಕ್ರಮ ಎದುರಿಸಬೇಕಾದೀತು’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಎನ್ಐಸಿಯು ಘಟಕಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಪ್ರತಿ ವಿಭಾಗದಲ್ಲೂ ಎಲ್ಲ ವೈದ್ಯಕೀಯ ಸಾಧನಗಳನ್ನು ಸೂಕ್ತ ಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು’ ಎಂದು ನಿರ್ದೇಶನ ಕೊಟ್ಟರು.

‘ನಿರ್ವಹಣೆಗಾಗಿ ಮೀಸಲಿರುವ ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು’ ಎಂದು ಡೀನ್ ಡಾ.ದಾಕ್ಷಾಯಿಣಿ ಮತ್ತು ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ್ ಅವರಿಗೆ ತಾಕೀತು ಮಾಡಿದರು.

ಬಿಸಿ ನೀರಿನ ಡಿಸ್ಪೆನ್ಸರ್ ಪೂರೈಕೆ:

ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದಾಗ, ಬಿಸಿ ನೀರಿನ ವ್ಯವಸ್ಥೆ ಇಲ್ಲದಿರುವ ಬಗ್ಗೆ ದೂರು ಕೇಳಿಬಂದಿತು. ಇದಕ್ಕೆ ಸ್ಪಂದಿಸಿದ ಸಂಸದರು, ವೈಯಕ್ತಿಕ ಹಣದಿಂದ ಬಿಸಿನೀರಿನ ಡಿಸ್ಪೆನ್ಸರ್ ವ್ಯವಸ್ಥೆ ಮಾಡಿಕೊಟ್ಟರು. ಇದಕ್ಕೆ ರೋಗಿಗಳಿಂದ ಮೆಚ್ಚುಗೆ ವ್ಯಕ್ತವಾಯಿತು.

‘ನಮ್ಮ ಪೂರ್ವಿಕರು ಸ್ಥಾಪಿಸಿರುವ ಈ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗೆ ಆದ್ಯತೆ ನೀಡಲು ಎಲ್ಲರೂ ಬದ್ಧರಾಗಿರಬೇಕು. ರೋಗಿಗಳು ಹಾಗೂ ಪೋಷಕರು ಬಯಸಿದಂತೆ ಪ್ರತಿ ಎರಡು ಅಥವಾ ಮೂರು ತಿಂಗಳಿಗೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ’ ಎಂದು ಯದುವೀರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.