ಮೈಸೂರು: ಮುಡಾದಿಂದ ನೀಡಲಾದ 14 ಬದಲಿ ನಿವೇಶನಗಳನ್ನು ವಾಪಸ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಬರೆದ ಪತ್ರವನ್ನು ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮುಡಾ ಆಯುಕ್ತರಿಗೆ ಸಲ್ಲಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಡಾ ಆಯುಕ್ತ ರಘುನಂದನ್ 'ಪಾರ್ವತಿ ಅವರ ಪರವಾಗಿ ಡಾ. ಯತೀಂದ್ರ ಪತ್ರವನ್ನು ನೀಡಿದ್ದಾರೆ. ಈ ಕುರಿತು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸುತ್ತೇವೆ' ಎಂದರು.