‘ಪ್ರಾಧಿಕಾರದಿಂದ ನಿವೇಶನಗಳ ಹಂಚಿಕೆ ವಿಷಯದಲ್ಲಿ ಕೇಳಿಬಂದಿರುವ ಆರೋಪಗಳ ಕುರಿತು ವಿಚಾರಣೆ ನಡೆಸಿ ವರದಿ ನೀಡಲು ಸರ್ಕಾರವು ನಿವೃತ್ತ ನ್ಯಾಯಾಧೀಶ ಪಿ.ಎನ್, ದೇಸಾಯಿ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗವನ್ನು ರಚಿಸಿದೆ. ಈ ಹಿಂದೆ ಮಂಜೂರಾತಿ ಪತ್ರದ ಸೆಕ್ಯುರಿಟಿ ಬಾಂಡ್ ಪಡೆದುಕೊಳ್ಳಲಾಗಿರುವ ಸಂಪೂರ್ಣ ಮಾಹಿತಿಯನ್ನು ಪ್ರಾಧಿಕಾರದಿಂದ ಆಯೋಗಕ್ಕೆ ಸಲ್ಲಿಸಲಾಗುವುದು. ಬಳಿಕ ಆಯೋಗವು ನೀಡುವ ವರದಿಯ ಅನುಸಾರ ಸರ್ಕಾರದ ನಿರ್ದೇಶನದಂತೆ ತಪ್ಪಿತಸ್ಥ ಅಧಿಕಾರಿಗಳು, ನೌಕರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.