ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಪರ್ಯಾಯ ನಿವೇಶನ ನೀಡಿದೆ: ಸಿಎಂ ಸ್ಪಷ್ಟನೆ

Published 2 ಜುಲೈ 2024, 16:39 IST
Last Updated 2 ಜುಲೈ 2024, 16:39 IST
ಅಕ್ಷರ ಗಾತ್ರ

ಬೆಂಗಳೂರು: ‘ನನ್ನ ಪತ್ನಿಗೆ ಸೇರಿದ ಜಮೀನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸ್ವಾಧೀನಪಡಿಸಿಕೊಂಡಿತ್ತು. ಅದಕ್ಕೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಬೇರೆ ಕಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ನೀಡಲಾಗಿತ್ತು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮುಡಾ ನಿವೇಶನ ಹಂಚಿಕೆ ಕುರಿತು ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ‘ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ವರ್ತುಲ ರಸ್ತೆಯ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು, ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. ಮುಡಾ ಸ್ವಾಧೀನಪಡಿಸಿಕೊಂಡರೆ ಪರ್ಯಾಯವಾಗಿ 50:50 ಅನುಪಾತದಲ್ಲಿ ನಿವೇಶನ ನೀಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು’ ಎಂದರು.

‘ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮುಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು’ ಎಂದರು.

‘ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ’ ಎಂದೂ ಮುಖ್ಯಮಂತ್ರಿ ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT