ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿರಿಯಾಪಟ್ಟಣ | ಹೆದ್ದಾರಿಯಲ್ಲಿ ಮಾನವ ಸರಪಳಿ: ಸಂಚಾರ ಅಸ್ತವ್ಯಸ್ತ

ಪಿರಿಯಾಪಟ್ಟಣ: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Published : 18 ಆಗಸ್ಟ್ 2024, 13:31 IST
Last Updated : 18 ಆಗಸ್ಟ್ 2024, 13:31 IST
ಫಾಲೋ ಮಾಡಿ
Comments

ಪಿರಿಯಾಪಟ್ಟಣ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌‌‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಭಾನುವಾರ ಪ್ರತಿಭಟನೆ ನಡೆಸಿ ಮಾನವ ಸರಪಳಿ ನಿರ್ಮಿಸಿ ತಾಲ್ಲೂಕು ಕಚೇರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು ಎನ್‌‌‌ಡಿಎ ಒಕ್ಕೂಟ ಮತ್ತು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು.

ಬಸವೇಶ್ವರ ವೃತ್ತದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಮಾನವ ಸರಪಳಿ ನಿರ್ಮಿಸಿದ್ದರಿಂದ ಮೈಸೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಎರಡು ಕಿಲೋಮೀಟರ್‌‌ಗೂ ಹೆಚ್ಚು ದೂರದವರೆಗೂ ನಿಂತಿದ್ದು ವಾಹನ ಸವಾರರು ಪರದಾಡುವಂತಾಯಿತು. ಪೊಲೀಸರು ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಹರಸಾಹಸ ಪಟ್ಟರು.

ಪಿರಿಯಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ ಮಾತನಾಡಿ,‘ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿ ಸುದೀರ್ಘ ರಾಜಕಾರಣದಲ್ಲಿ ಒಂದು ಕಪ್ಪು ಚುಕ್ಕಿ ಇರದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

ನಂತರ ಮಾತನಾಡಿದ ಕೆಪಿಸಿಸಿ ಸದಸ್ಯ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ‘ಸಿದ್ಧರಾಮಯ್ಯನವರು ಮುಡಾ ಪ್ರಕರಣದಲ್ಲಿ ಯಾವುದೇ ರೀತಿಯಲ್ಲಿ ಪ್ರಭಾವ ಬೀರದೆ ಇದ್ದರೂ ಬಿಜೆಪಿಯವರ ಪಿತೂರಿಯಿಂದ ರಾಜ್ಯಪಾಲರು ಈ ಕೆಟ್ಟನಿರ್ಧಾರ ಮಾಡಿದ್ದಾರೆ. ಸೋಮವಾರವೂ ಪ್ರತಿಭಟನೆ ನಡೆಸಲಾಗುವುದು’ ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ತಹಶೀಲ್ದಾರ್ ಕಚೇರಿಗೆ ತೆರಳಿ ಉಪತಹಶೀಲ್ದಾರ್ ಶುಭ ಅವರಿಗೆ ಮನವಿ ಸಲ್ಲಿಸಿದರು.

ಮುಖಂಡರಾದ ಎಚ್.ಡಿ ಗಣೇಶ್, ಮಾತನಾಡಿದರು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮತ್ ಜಾನ್ ಬಾಬು, ಟೌನ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷರಾದ ರಘು, ಅರ್ಜುನ್, ಪಟೇಲ್, ಮಣಿ, ಮುಖಂಡರಾದ ನಾಗರಾಜು, ಬಿ.ವಿ.ಅನಿತಾ, ಸರಸ್ವತಿ, ಪುಟ್ಟಯ್ಯ, ರಾಮಚಂದ್ರ, ಪುಟ್ಟರಾಜು, ಶೇಖರ್, ಪಿ.ಪಿ. ಮಹದೇವ್, ಪುರಸಭಾ ಸದಸ್ಯ ರವಿ, ಎಚ್.ಜಿ. ಪರಮೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT