ಮೈಸೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದೆ.
ಕೃಷ್ಣ ವಿರುದ್ಧ 2015ರಲ್ಲಿ ಕುಮಾರ್ ಎಂಬುವರು ಚೆಕ್‌ಬೌನ್ಸ್ ಪ್ರಕರಣ ದಾಖಲಿಸಿದ್ದರು. ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯದಲ್ಲಿ ಮಂಗಳವಾರ ನಡೆದ ವಿಚಾರಣೆಗೆ ಕೃಷ್ಣ ಹಾಜರಾಗಬೇಕಿತ್ತು. ಗೈರಾದ ಹಿನ್ನೆಲೆಯಲ್ಲಿ ವಾರಂಟ್ ಜಾರಿಗೊಳಿಸಿ ನ್ಯಾಯಾಧೀಶರು ಆದೇಶಿಸಿದರು.