ಮೈಸೂರು: ‘ಸಿದ್ದರಾಮಯ್ಯ ಅವರು ಮುಡಾ ನಿವೇಶನಗಳನ್ನು ಹಿಂದಿರುಗಿಸಿದಿದ್ದರೆ, ಈಗ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ’ ಎಂದು ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು.

‘ಹಗರಣ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮೊದಲು ನಾನು ದೂರು ನೀಡಿದ್ದೆ. ಆಗ, ಮುಖ್ಯಮಂತ್ರಿ ನಿರ್ಲಕ್ಷ್ಯ ವಹಿಸಿದರು’ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಹೇಳಿದರು.

‘ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನನ್ನ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆ. ಅವರಿಗೆ ನೋಟಿಸ್ ಕೊಡಿಸುವೆ’ ಎಂದರು.

‘ಹಲವರು ಮುಖ್ಯಮಂತ್ರಿ ಮುಂದಿಟ್ಟುಕೊಂಡು ಹಗರಣದಿಂದ ಪಾರಾಗಲು ಪ್ರಯತ್ನಿಸುತ್ತಿದ್ದಾರೆ. ಈ ವಿಷಯದಲ್ಲಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

ಮುಖಂಡ ಎಂ. ಮೋಹನ್, ‘ಮುಖ್ಯಮಂತ್ರಿ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡುವ ಮೂಲಕ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ’ ಎಂದರು.

ಬಿಗಿ ಬಂದೋಬಸ್ತ್: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ನಗರದ ಚಾಮರಾಜಪುರಂನ ಬಿಜೆಪಿ ಕಚೇರಿಗೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆ ಕಚೇರಿ ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪೊಲೀಸರನ್ನು ನಿಯೋಜಿಸಲಾಗಿದೆ.

ಆಗಿನ ರಾಜ್ಯಪಾಲರ ಹಾದಿಯಲ್ಲೇ:

‘ನಿವೇಶನ ಹಿಂದಿರುಗಿಸಿ ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂಬ ನನ್ನ ಕಾಳಜಿಯನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಲಿಲ್ಲ. ಈಗ ಗಂಡಾಂತರ ಮೈಮೇಲೆ ಎಳೆದುಕೊಂಡಿದ್ದಾರೆ. ಯಡಿಯೂರಪ್ಪ ಅವಧಿಯಲ್ಲಿ ಆಗಿನ ರಾಜ್ಯಪಾಲರು ಹಾಕಿಕೊಟ್ಟ ಹಾದಿಯಲ್ಲೇ ಈಗಿನ ರಾಜ್ಯಪಾಲರು ಅನುಮತಿ ನೀಡಿದ್ದಾರೆ’ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಸಮರ್ಥಿಸಿಕೊಂಡರು.

‘ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈಗ ಜೈಲಿನಿಂದಲೇ ಆಡಳಿತ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಯಾವ ಹಾದಿ ಆಯ್ಕೆ ಮಾಡಿಕೊಳ್ಳುತ್ತಾರೆಯೋ ನೋಡೋಣ’ ಎಂದರು.

ಪ್ರತಾಪ ಮಾಧ್ಯಮದವರೊಂದಿಗೆ ಮಾತನಾಡುವಾಗಲೇ ಸಿದ್ದರಾಮಯ್ಯ ಅಭಿಮಾನಿಗಳು ಅಕಸ್ಮಾತ್ ಮುಖಾಮುಖಿಯಾದರು.

‘ನೀವೇ ಹೇಳಿ ರಾಜ್ಯಪಾಲರು ಮಾಡಿದ್ದು ತಪ್ಪಲ್ವಾ’ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಕೇಳಿದರು. ‘ನಿವೇಶನ ಹಿಂದಿರುಗಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಮೇಲ್ಪಂಕ್ತಿ ಹಾಕಿ ಎಂದು ನಾನು ಹಿಂದೆಯೇ ಹೇಳಿದ್ದೆ. ಆದರೆ, ಅವರು ಕೇಳಲಿಲ್ಲ’ ಎಂದು ಪ್ರತಾಪ ಹೇಳಿದರು.

‘ನೀವು ಹೇಳಿದ್ದು ಸತ್ಯ. ನಿಮಗೆ ಟಿಕೆಟ್ ಕೈ ತಪ್ಪಿದಾಗ ನಿಮ್ಮ ಪರ ಮಾತನಾಡಿದ್ದೆವು. ಈಗ ನೋವಾಗಿಲ್ಲವೇ ಹೇಳಿ’ ಎಂಬ ಸಿದ್ದರಾಮಯ್ಯ ಅಭಿಮಾನಿಗಳ ಪ್ರಶ್ನೆಗೆ, ‘ಎಲ್ಲರೂ ಸೇರಿ ಒಳ್ಳೆಯವರನ್ನು ಬೆಂಬಲಿಸಿ’ ಎಂದು ಪ್ರತಾಪ ಕೈಮುಗಿದು ಹೊರಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.