ಮೈಸೂರು: ‘ಸಮರ್ಪಕವಾಗಿ ಕಾರ್ಯನಿರ್ವಹಿಸದ, ಭ್ರಷ್ಟಾಚಾರದಲ್ಲಿ ಮುಳುಗಿದ ಚುನಾಯಿತ ಪ್ರತಿನಿಧಿಗಳನ್ನು ವಾಪಸ್ ಕರೆಸಿಕೊಳ್ಳುವ ಅಧಿಕಾರ ಮತದಾರರಿಗೆ ಇರಬೇಕು’ ಎಂದು ಚಲನಚಿತ್ರ ನಟ ‘ಮುಖ್ಯಮಂತ್ರಿ’ ಚಂದ್ರು ಹೇಳಿದರು.

ಇಲ್ಲಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ದಾರಿ ಫೌಂಡೇಷನ್ ಗುರುವಾರ ಏರ್ಪಡಿಸಿದ್ದ ‘ಭವಿಷ್ಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆಯ ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ’ ಕುರಿತ ಮುಕ್ತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಈಗ, ಚುನಾಯಿತ ಪ್ರತಿನಿಧಿಗಳು ಐದು ವರ್ಷಗಳವರೆಗೆ ಏನು ಮಾಡಿದರೂ ಕೇಳುವಂತಿಲ್ಲ ಎಂಬಂತಿದೆ. ಈ ವ್ಯವಸ್ಥೆ ಹೋಗಬೇಕು. ಅವರು ಮತದಾರರಿಗೆ ಉತ್ತರದಾಯಿಗಳಾಗಿರಬೇಕು. ಜನರು ಪ್ರಶ್ನಿಸುತ್ತಾರೆಂಬ ಭಯವಿರಬೇಕು’ ಎಂದರು.

‘ಗೆಲುವಿಗೆ ಚಲಾಯಿತ ಮತಗಳ ಪೈಕಿ ಶೇ.50ರಷ್ಟನ್ನು ಪಡೆದಿರಬೇಕು ಎಂಬ ಮಾನದಂಡವನ್ನು ಮಾಡಬೇಕು’ ಎಂದು ಒತ್ತಾಯಿಸಿದರು.

ಬದಲಿಸಲಾಗದು:

‘ಕೆಲವರು ಸಂವಿಧಾನವನ್ನು ಬದಲಿಸುವ ಮಾತನಾಡುತ್ತಾರೆ. ಖಂಡಿತ ಅದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲತತ್ವಗಳನ್ನು ಬದಲಿಸಲು ಅವಕಾಶವೇ ಇಲ್ಲ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು’ ಎಂದರು.

‘ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗದ ಜೊತೆಗೆ ಅನಧಿಕೃತವಾಗಿ ಮಾಧ್ಯಮ ರಂಗವೂ ಇದೆ. ಇತ್ತೀಚೆಗೆ ಧರ್ಮ ಎಂಬ ಮತ್ತೊಂದು ಅಂಗವೂ ಕಾಣಿಸುತ್ತಿದೆ. ಧರ್ಮ ಇತಿಮಿತಿಯಲ್ಲಿರಬೇಕೇ ಹೊರತು ಅದೇ ಮುಖ್ಯ ಆಗಬಾರದು’ ಎಂದು ಹೇಳಿದರು.

‘ಸರ್ಕಾರಗಳು ಎಲ್ಲರಿಗೂ ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯವನ್ನು ಉಚಿತವಾಗಿ ಕಲ್ಪಿಸಬೇಕು. ಸರ್ಕಾರಿ ಶಾಲೆಗಳು, ಕಾಲೇಜುಗಳು ಹಾಗೂ ಆಸ್ಪತ್ರೆಗಳನ್ನು ಬಲಪಡಿಸಬೇಕು. ರೈತರಿಗೆ ಬೆಂಬಲ ಬೆಲೆ ಬದಲು ಸಮರ್ಪಕವಾಗಿ ನೀರು ಹಾಗೂ ವಿದ್ಯುತ್ ಪೂರೈಸಬೇಕು’ ಎಂದು ಒತ್ತಾಯಿಸಿದರು.

ಕನ್ನಡಕ್ಕೆ ಆದ್ಯತೆ ಇರಲಿ:

‘ಹಿಂದಿ ರಾಷ್ಟ್ರ ಭಾಷೆಯಲ್ಲ. ಸಂವಿಧಾನದ 9ನೇ ಶೆಡ್ಯೂಲ್ನಲ್ಲಿ ಹೇಳಿರುವಂತೆ ಅದೂ ಒಂದು ಭಾಷೆಯಷ್ಟೆ. ಕರ್ನಾಟಕದಲ್ಲಿ ಎಲ್ಲಾ ಹಂತಗಳಲ್ಲೂ ಕನ್ನಡಕ್ಕೆ ಆದ್ಯತೆ ಸಿಗಬೇಕು. ಇಂಗ್ಲಿಷ್ ಕೂಡ ಚೆನ್ನಾಗಿ ಕಲಿಯಬೇಕು. ದೇಶಪ್ರೇಮ, ನಾಡಪ್ರೇಮ, ಮಾತೃಭಾಷಾ ಪ್ರೇಮ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಸಿ. ನಟರಾಜ್, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಮೂರೂ ಮಹಾರಾಣಿ ಕಾಲೇಜುಗಳ ಹಾಸ್ಟೆಲ್ ನಿರ್ಮಾಣಕ್ಕೆ ₹ 291 ಕೋಟಿ ನೀಡಿದ್ದು, ನಮ್ಮ ಕಾಲೇಜಿಗೆ 50 ಕೋಟಿ ದೊರೆತಿದೆ. ಈ ಮೂಲಕ ಸರ್ಕಾರವು ಗ್ರಾಮೀಣ, ಬಡ ಹಾಗೂ ಮಧ್ಯಮವರ್ಗದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿದೆ’ ಎಂದು ಹೇಳಿದರು.

ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ದಾರಿ ಫೌಂಡೇಷನ್ ಅಧ್ಯಕ್ಷ ಎಲ್. ರಂಗಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಕಾರ್ಯದರ್ಶಿ ತಗಡೂರು ವೀರೇಶ್ಕುಮಾರ್ ಮಹಾಮನೆ ಪ್ರಾಸ್ತಾವಿಕ ಭಾಷಣ ಮಾಡಿದರು. ಸಂಚಾಲಕ ಪ್ರಭಾಕರ್, ಐಕ್ಯೂಎಸಿ ಸಂಚಾಲಕ ಎಸ್. ಮುತ್ತುರಾಜ, ಖಜಾಂಚಿ ರಾಘವೇಂದ್ರ, ಮಲ್ಲಣ್ಣ, ತೋಂಟೇಶ್ ಇದ್ದರು.

ಮೈಸೂರು ಎಂ. ಮಹಾಲಿಂಗ ನಾಡಗೀತೆ ಹಾಗೂ ಸಂವಿಧಾನಗೀತೆ ಹಾಡಿದರು. ವಿದ್ಯಾರ್ಥಿನಿ ಅಧ್ಯಕ್ಷೆ ಎಸ್.ಜೆ. ಸಿಂಚನಾ ಸ್ವಾಗತಿಸಿದರು. ಕಾರ್ಯದರ್ಶಿ ಸೈಯದಾ ನೂರೈನ್ ನಿರೂಪಿಸಿದರು. ಪಲ್ಲವಿ ಪರಿಚಯಿಸಿದರು. ತನುಶ್ರೀ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.