ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ: ವಿದ್ಯಾರ್ಥಿ ಬಂಧನ

Published 21 ಸೆಪ್ಟೆಂಬರ್ 2023, 4:46 IST
Last Updated 21 ಸೆಪ್ಟೆಂಬರ್ 2023, 4:46 IST
ಅಕ್ಷರ ಗಾತ್ರ

ಮೈಸೂರು: ಜೆ.ಪಿ.ನಗರದಲ್ಲಿ ಜೆಎಸ್‌ಎಸ್‌ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟದಲ್ಲಿ ತೀವ್ರ ಗಾಯಗೊಂಡಿದ್ದ ಕೃಷ್ಣ (17), ಬುಧವಾರ ಮೃತಪಟ್ಟಿದ್ದಾರೆ.

ಈ ಕೊಲೆ ಸಂಬಂಧ ಕಾನೂನು ಸಂಘರ್ಷ ಎದುರಿಸುತ್ತಿರುವ ಮತ್ತೊರ್ವ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

‘ಮಂಗಳವಾರ ಪರಚಿ ಗಾಯಗೊಳಿಸಿದ ಕಾರಣಕ್ಕೆ ಆರಂಭವಾದ ಜಗಳದಲ್ಲಿ ಮಹದೇವಪುರ ನಿವಾಸಿ ಕೃಷ್ಣ ಅವರಿಗೆ ಆರೋಪಿ ವಿದ್ಯಾರ್ಥಿಯು ಮುಷ್ಠಿಯಲ್ಲಿ ಕತ್ತಿನ ಭಾಗಕ್ಕೆ ಹೊಡೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕನ ಪೋಷಕರು ನೀಡಿದ ದೂರನ್ನು ಆಧರಿಸಿ ವಿದ್ಯಾರಣ್ಯಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT