ಮೈಸೂರು: ಸಂಗೀತ ಮತ್ತು ಪ್ರದರ್ಶಕ ಕಲೆಗಳ ಹಲವು ಪ್ರಾಕಾರಗಳಲ್ಲಿ ಶಿಕ್ಷಣ ನೀಡುವ ಸಲುವಾಗಿ ಇಲ್ಲಿನ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ಸಂಗೀತ ವಿಶ್ವವಿದ್ಯಾಲಯವು ಆರು ಖಾಸಗಿ ಸಂಸ್ಥೆಗಳೊಂದಿಗೆ ಶುಕ್ರವಾರ ಒಪ್ಪಂದ ಮಾಡಿಕೊಂಡಿತು.

ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಅವರ ದೇಸಿ ಸಂಸ್ಥೆಯು ಜಾನಪದ ಐಧನಿ, ಜಾನಪದ ಸಂಗೀತ, ಹಿಂದೂಸ್ಥಾನಿ ಸಂಗೀತ ಮತ್ತು ಚಲನಚಿತ್ರ– ಸುಗಮ ಸಂಗೀತ ಸರ್ಟಿಫಿಕೆಟ್ ಕೋರ್ಸ್‌ಗಳಿಗೆ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಹಂಸಲೇಖ ಹಾಗೂ ಕುಲಪತಿ ಪ್ರೊ.ನಾಗೇಶ್ ವಿ. ಬೆಟ್ಟಕೋಟೆ ಸಹಿ ಹಾಕಿದರು.

ಇದರೊಂದಿಗೆ, ಬೆಂಗಳೂರಿನ ದಕ್ಷ ಅಕಾಡೆಮಿ, ಕೈಲಾಸ ಕಲಾಧರ, ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರ, ಸಾಗರದ ನಾಟ್ಯ ತರಂಗ ಟ್ರಸ್ಟ್ ಹಾಗೂ ಬೆಂಗಳೂರಿನ ಠಾಗೂರ್ ಕಲ್ಚರಲ್ ಅಕಾಡೆಮಿ ಜೊತೆ ಒಪ್ಪಂದ ಮಾಡಿಕೊಳ್ಳಲಾಯಿತು. ಇದರೊಂದಿಗೆ, 2023–24ನೇ ಸಾಲಿನಲ್ಲಿ ಒಟ್ಟು 39 ಸಂಸ್ಥೆಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದಂತಾಯಿತು.

ಪ್ರಭಾರ ಹಣಕಾಸು ಅಧಿಕಾರಿ ರೇಖಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.