ಮೈಸೂರು: ‘ಸರ್ಕಾರಿ ಕಾಮಗಾರಿಗಳಲ್ಲಿ ಧರ್ಮಾಧಾರಿತವಾಗಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ’ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು.

‘ಸರ್ವರಿಗೂ ಸಮ ಬಾಳು ಸರ್ವರಿಗೂ ಸಮಪಾಲು ಎಂದು ಹೇಳುವ ಸರ್ಕಾರ ಮತ ಬ್ಯಾಂಕ್ಗಾಗಿ ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ. ಬಹುತೇಕ ಉನ್ನತ ಹುದ್ದೆಗಳನ್ನೂ ಅವರಿಗೆ ನೀಡಿ ಈ ಬಾರಿಯ ಬಜೆಟ್ನಲ್ಲೂ ಓಲೈಸಲು ಹೆಚ್ಚಿನ ಹಣ ಘೋಷಿಸಿದೆ. ಅದೂ ಸಾಲದೆಂಬಂತೆ ಸರ್ಕಾರಿ ಗುತ್ತಿಗೆಯ ಕಾಮಗಾರಿಗಳಲ್ಲಿ ಧರ್ಮಾಧಾರಿತವಾಗಿ ಶೇ 4ರಷ್ಟು ಮೀಸಲಾತಿ ನೀಡಲು ಮುಂದಾಗಿದೆ’ ಎಂದು ಕಿಡಿಕಾರಿದರು.

‘ಸರ್ಕಾರ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಬೆಲೆ ನೀಡುತ್ತಿಲ್ಲ. ಅರ್ಹರಿಗೆ ಸೌಲಭ್ಯ ಕೊಡಲು ಹಿಂದೇಟು ಹಾಕುತ್ತಿದೆ. ಸರ್ಕಾರ ಕೂಡಲೇ ಈ ಅವೈಜ್ಞಾನಿಕ ಹಾಗೂ ಸಂವಿಧಾನ ವಿರೋಧಿ ಮೀಸಲಾತಿ ರದ್ದು ಮಾಡಿ ಎಲ್ಲರನ್ನೂ ಸಮನಾಗಿ ಕಾಣಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಮಹೇಶ್ ಕಾಮತ್, ಮಧು ಶಂಕರ್, ವಿ.ಎನ್.ದಾಸ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.