ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಶೀಘ್ರದಲ್ಲೇ ಕ್ಷೇತ್ರ ಪ್ರಕಟ: ಮುತಾಲಿಕ್‌

Last Updated 21 ಡಿಸೆಂಬರ್ 2022, 8:41 IST
ಅಕ್ಷರ ಗಾತ್ರ

ಮೈಸೂರು: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ನಿಶ್ಚಿತ. ಕ್ಷೇತ್ರ ಯಾವುದು ಎನ್ನುವುದನ್ನು ತಿಂಗಳಾಂತ್ಯದಲ್ಲಿ ಪ್ರಕಟಿಸುತ್ತೇನೆ’ ಎಂದು ಶ್ರೀರಾಮಸೇನೆ ಸಂಸ್ಥಾ‍ಪಕ ಪ್ರಮೋದ್ ಮುತಾಲಿಕ್ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಜಮಖಂಡಿ, ಬಾಗಲಕೋಟೆ, ಧಾರವಾಡ ನಗರ, ಶೃಂಗೇರಿ, ಕಾರ್ಕಳ ಈ ಕ್ಷೇತ್ರಗಳಲ್ಲಿ ಒಂದು ಆಯ್ಕೆ ಮಾಡಲಿದ್ದೇನೆ. ಬಿಜೆಪಿಗೆ ಟಿಕೆಟ್ ಕೇಳಿದ್ದೇನೆ. ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ. ಹಿಂದುತ್ವದ ಕಾರ್ಯಸೂಚಿಯ ಮೇಲೆ ಗೆಲ್ಲುವ ವಿಶ್ವಾಸವಿದೆ’ ಎಂದರು.

‘ಸಮಾನ ಮನಸ್ಕರು ಬಿಜೆಪಿಯಿಂದ 25 ಟಿಕೆಟ್ ಕೋರಿದ್ದೇವೆ. ಈ ಪೈಕಿ ಐವರು ಸ್ವಾಮೀಜಿಗಳಿಗೂ ಕೇಳಿದ್ದೇವೆ. ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿದ್ದೇವೆ’ ಎಂದು ಹೇಳಿದರು. ಪರಿಶಿಷ್ಟರಿಗೆ, ಮಹಿಳೆಯರಿಗೆ ಮೀಸಲು ಇರುವಂತೆ ಬಿಜೆಪಿಯಲ್ಲಿ ಹಿಂದೂಗಳಿಗೂ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.

ವಿಧಾನಸೌಧದಲ್ಲಿ ಸಾವರ್ಕರ್ ಫೋಟೊ ಅನಾವರಣಕ್ಕೆ ಕಾಂಗ್ರೆಸ್ ಆಕ್ಷೇಪದ ಬಗ್ಗೆ ಪ್ರತಿಕ್ರಿಯಿಸಿದ ಮುತಾಲಿಕ್, ‘ಕಾಂಗ್ರೆಸ್‌ನ ಸಿದ್ದರಾಮಯ್ಯ ಒಂದೇ ಒಂದು ದಿನ ಅಂಡಮಾನ್ ಜೈಲಿನಲ್ಲಿದ್ದ ಬರಲಿ. ಆಗ, ಸಾವರ್ಕರ್ ಅನುಭವಿಸಿದ ಕಷ್ಟ ಏನೆಂದು ಗೊತ್ತಾಗುತ್ತದೆ’ ಎಂದು ತಿರುಗೇಟು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT