ಮೈಸೂರು: ಇಲ್ಲಿನ ಲೋಕಾಯುಕ್ತ ಎಸ್.ಪಿ. ಕಚೇರಿಗೆ ಗುರುವಾರ ಕಾಂಗ್ರೆಸ್ ಮುಖಂಡರ ನಿಯೋಗವು ಭೇಟಿ ನೀಡಿತು.
ಈ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ 'ಸ್ನೇಹಮಯಿ ಕೃಷ್ಣ ದೂರು ಆಧರಿಸಿ ಪ್ರಕರಣ ದಾಖಲಿಸಲು ನ್ಯಾಯಾಲಯವು ಆದೇಶ ನೀಡಿದೆ. ಆದರೆ ಆ ಆದೇಶ ಆದ ಬಳಿಕವೂ ಜೆಡಿಎಸ್ ಮುಖಂಡರು ಮೈಸೂರಿನ ಲೋಕಾಯುಕ್ತ ಎಸ್.ಪಿ. ಕಚೇರಿಗೆ ಭೇಟಿ ನೀಡಿ, ಒತ್ತಡ ಹೇರುತ್ತಿರುವುದು, ಗಲಾಟೆ ಮಾಡುವುದು ಸರಿಯಲ್ಲ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಿಜೆಪಿ- ಜೆಡಿಎಸ್ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಬೇಕು. ಅವರನ್ನು ಬಂಧಿಸಬೇಕು' ಎಂದು ಒತ್ತಾಯಿಸಿದರು.
'ಪೊಲೀಸರು ನ್ಯಾಯಾಲಯದ ಆದೇಶ ಪಾಲಿಸಿ. ಆದರೆ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧವೂ ದೂರು ದಾಖಲಿಸಿ. ನಿಮ್ಮನ್ನು ನಿಂದಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ' ಎಂದು ಒತ್ತಾಯಿಸಿದರು.
ಲೋಕಾಯುಕ್ತ ಎಸ್.ಪಿ. ಕರ್ತವ್ಯದ ಮೇಲೆ ಹೊರ ಹೋಗಿದ್ದು, ಅವರು ಬಂದ ಬಳಿಕ ಲಿಖಿತ ದೂರು ಸಲ್ಲಿಸುವುದಾಗಿ ತಿಳಿಸಿದರು.
ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್, ಕಾಂಗ್ರೆಸ್ ಮುಖಂಡ ಮಹೇಶ್ ಜೊತೆಗಿದ್ದರು.