ಮೈಸೂರು: ತಾಲ್ಲೂಕಿನ ಹೊಸಹುಂಡಿ ಗ್ರಾಮದ ನಿವಾಸಿ, ಕಾಂಗ್ರೆಸ್ ಮುಖಂಡ ಸಿ.ನರಸೇಗೌಡ (84) ವಯೋಸಹಜ ಅನಾರೋಗ್ಯದಿಂದ ಶನಿವಾರ ಭಾನವಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪುತ್ರ, ಭಾನವಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಎನ್. ವಿಜಯ್ ಚೆಲುವರಾಜ್, ನಾಲ್ವರು ಪುತ್ರಿಯರು, ಸೊಸೆ, ಅಳಿಯಂದಿರು ಮತ್ತು ಮೊಮ್ಮಕ್ಕಳು ಇದ್ದಾರೆ.

ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಹೊಸಹುಂಡಿಯ ಅವರ ಜಮೀನಿನಲ್ಲಿ ಭಾನುವಾರ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಡಿ.ರವಿಶಂಕರ್, ಡಾ.ಯತೀಂದ್ರ ಸಿದ್ದರಾಮಯ್ಯ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಮುಖಂಡರಾದ ರಾಕೇಶ್ ಪಾಪಣ್ಣ, ಮಂಜುಳಾ ಮೊದಲಾದವರು ಅಂತಿಮ ದರ್ಶನ ಪಡೆದರು.

ಭಾನವಿ ಚಾರಿಟಬಲ್ ಟ್ರಸ್ಟ್ ಹಾಗೂ ಭಾನವಿ ಆಸ್ಪತ್ರೆಯ ಸಂಸ್ಥಾಪಕರು, ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ನರಸೇಗೌಡ ಅವರು, ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆಗಿದ್ದರು. ಕೆಪಿಸಿಸಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಕುವೆಂಪುನಗರದಲ್ಲಿ ಭಾನವಿ ಆಸ್ಪತ್ರೆ, ಲಲಿತಾದ್ರಿಪುರದ ವರ್ತುಲ ರಸ್ತೆ ಸಮೀಪದಲ್ಲಿ ಭಾನವಿ ಕಲ್ಯಾಣಮಂಟಪ ನಿರ್ಮಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.