ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: 15 ಸೆಕೆಂಡ್‌ನಲ್ಲಿ ಮುಗಿದ ವಜ್ರಮುಷ್ಟಿ ಕಾಳಗ

Last Updated 5 ಅಕ್ಟೋಬರ್ 2022, 7:16 IST
ಅಕ್ಷರ ಗಾತ್ರ

ಮೈಸೂರು: ಅಂಬಾವಿಲಾಸ ಅರಮನೆಯಲ್ಲಿ ವಿಜಯದಶಮಿ ಪ್ರಯುಕ್ತ ಬುಧವಾರ ಜಟ್ಟಿಗಳ ವಜ್ರಮುಷ್ಟಿ ಕಾಳಗ ರೋಚಕತೆಯಿಂದ ಕೂಡಿದ್ದಲ್ಲದೆ, ಎಲ್ಲರ ಮೈ ನವಿರೇಳಿಸಿತು.

10.30ಕ್ಕೆ ಎರಡು ಜೋಡಿ ಅಖಾಡಕ್ಕೆ ಇಳಿಯಿತು. ಇಡೀ ದೇಹಕ್ಕೆಮಣ್ಣು ಬಳಿದುಕೊಂಡಿದ್ದ ಜಟ್ಟಿಗಳು, ಕಾಳಗಕ್ಕೆ ಸಿದ್ದಗೊಂಡಿದ್ದರು.

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪಟ್ಟದ ಕತ್ತಿಗೆ ಪೂಜೆ‌ ಸಲ್ಲಿಸುತ್ತಿದ್ದಂತೆ ಕಾಳಗ ಆರಂಭವಾಯಿತು.

ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ ಜೆಟ್ಟಿ ಅವರ ಶಿಷ್ಯ ಮನೋಜ್ ಜೆಟ್ಟಿ ಅವರು ಚಾಮರಾಜನಗರದ ಉಸ್ತಾದ್ ಬಂಗಾರ್ ಜೆಟ್ಟಿ ಅವರ ಶಿಷ್ಯ ಅಚ್ಯುತ ಜೆಟ್ಟಿ ಅವರ ತಲೆಭಾಗಕ್ಕೆ ವಜ್ರನಖದಿಂದ ಹೊಡೆದು ರಕ್ತ ಚಿಮ್ಮಿಸಿದರು. 15 ಸೆಕೆಂಡ್ ನಲ್ಲಿ ಕಾಳಗ ಅಂತ್ಯಗೊಂಡಿತು.ಜನರು ಕೆಲವೇ ಕ್ಷಣಗಳ ಹೋರಾಟವನ್ನು ಕಣ್ತುಂಬಿಕೊಂಡರು.

ಮೈಸೂರಿನ ಉಸ್ತಾದ್ ಟೈಗರ್ ಬಾಲಾಜಿ ಪುತ್ರ ಮೈಸೂರಿನ ವಿಷ್ಣು ಜಟ್ಟಿ ಮತ್ತು ಬೆಂಗಳೂರಿನ ಉಸ್ತಾದ್ ಕೃಷ್ಣ ಶೆಟ್ಟಿ ಶಿಷ್ಯ ತಾರಾನಾಥ ಜೆಟ್ಟಿ ನಡುವೆಯೂ ಕಾಳಗ ನಡೆಯಿತು. ಕಾಳಗ ಬಿಡಿಸುವ ದಶಬಂಧಿಗಳಾಗಿ ಟೈಗರ್ ಬಾಲಾಜಿ, ನಾಗರಾಜ ಇದ್ದರು.

'ವಜ್ರಮುಷ್ಟಿ ಕಾಳಗವು ಸೋಲು, ಗೆಲುವಿನ ಕಾಳಗವಲ್ಲ. ವಿಜಯದಶಮಿಯಂದು ನಾಡದೇವಿಗೆ ಸಂಪ್ರದಾಯದಂತೆ ರಕ್ತಾರ್ಪಣೆ ಸಲ್ಲಿಸಿ ತ್ಯಾಗ ಮಾಡುವುದಾಗಿದೆ' ಎಂದು ಉಸ್ತಾದ್ ಮಾಧವ ಜೆಟ್ಟಿ 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT